ಬ್ರೇಕಿಂಗ್ ನ್ಯೂಸ್
19-08-26 09:52 pm HK News Staffer ಕರ್ನಾಟಕ
ಬೆಂಗಳೂರು, ಆ.19: ನಗರದ ರಿಚ್ಮಂಡ್ ಟೌನ್‌ನಲ್ಲಿರುವ ಖಾಸಗಿ ಶಾಲೆ ಒಂದರಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಏಕಾಏಕಿ ಜ್ವರ ಬಾಧೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ಶಾಲೆಯನ್ನೇ ಬಂದ್ ಮಾಡಲಾಗಿದೆ. ಆಸುಪಾಸಿನಲ್ಲಿ ಎಚ್1ಎನ್1 ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ರಿಚ್ಮಂಡ್ ಟೌನ್ ವ್ಯಾಪ್ತಿಯ ಖಾಸಗಿ ಶಾಲೆಯ 2,500 ವಿದ್ಯಾರ್ಥಿಗಳ ಪೈಕಿ 500 ವಿದ್ಯಾರ್ಥಿಗಳಲ್ಲಿ ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡಿದೆ. ಸಿಬ್ಬಂದಿಗೂ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದರಿಂದ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಮೊದಲು ಜ್ವರ ಕಾಣಿಸಿಕೊಂಡ 137 ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲದೆ, ಶಾಲೆಯನ್ನು ಸಂಪೂರ್ಣ ಸ್ಯಾನಿಟೈಸ್ ಹಾಕಿ ಸ್ವಚ್ಛಗೊಳಿಸಲಾಗಿತ್ತು.
ಆನಂತರ, ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳು ಶಾಲೆಗೆ ಬಾರದಂತೆ ಸೂಚಿಸಿ ತರಗತಿಗಳನ್ನು ಮತ್ತೆ ಆರಂಭಿಸಲಾಗಿತ್ತು. ಆದರೆ, ಇಬ್ಬರಲ್ಲಿ H1N1 ಸೋಂಕು ದೃಢಪಟ್ಟಿದ್ದಲ್ಲದೆ, ಜ್ವರ, ಕೆಮ್ಮು ಬಂದವರ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಮಾಂಟೆಸ್ಸರಿ, ಪ್ರಾಥಮಿಕ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ 6 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.
ಶಾಲೆಯ ಅಕ್ಕಪಕ್ಕದಲ್ಲಿರುವ ಬೀದಿ ಬದಿಯ ಆಹಾರ ಮಾರಾಟ ಅಂಗಡಿಗಳು, ತಂಪು ಪಾನೀಯ ಅಂಗಡಿಗಳು ಶುಚಿತ್ವ ಕಾಪಾಡದೇ ಇರುವುದೇ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅನಾರೋಗ್ಯಕ್ಕೆ ಕಾರಣ ಎಂದು ಶಾಲಾ ಆಡಳಿತ ಮಂಡಳಿ ಆರೋಪಿಸಿದೆ. ಎಗ್ ರೈಸ್, ಕಬಾಬ್ ಅಂಗಡಿಗಳು ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಜತೆಗೆ ಬೀದಿ ಬದಿಯೇ ಮೂತ್ರವಿಸರ್ಜನೆ ಮಾಡುತ್ತಿರುವುದರಿಂದ ಶಾಲೆಯ ಪರಿಸರಕ್ಕೆ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿದೆ.
ಏನಿದು H1N1 ವೈರಸ್?
H1N1 ಎಂಬುದು ಇನ್ಫ್ಲುಯೆನ್ಸ A ವೈರಸ್‌ನಿಂದ ಉಂಟಾಗುವ ಉಸಿರಾಟದ ಸೋಂಕಾಗಿದ್ದು, ಸಾಮಾನ್ಯವಾಗಿ ಇದು ಮೂಗು, ಗಂಟಲು ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ, ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ, ಮಾತನಾಡುವಾಗ ಸೂಕ್ಷ್ಮ ಕಣದ ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಹೀಗಾಗಿ ಈ ಸೋಂಕು ಸಾಂಕ್ರಾಮಿಕ ಎಂದು ಪರಿಗಣಿಸಲ್ಪಟ್ಟಿದ್ದು ಎಚ್ಚರಿಕೆ ವಹಿಸಬೇಕಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm