ಬ್ರೇಕಿಂಗ್ ನ್ಯೂಸ್
31-08-26 08:29 pm HK News Staffer ಕರ್ನಾಟಕ
ಬೆಂಗಳೂರು , ಆ.31: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ಕ್ಕೆ ಆರಂಭಕ್ಕೂ ಮುನ್ನವೇ ಸಂಕಷ್ಟ ಎದುರಾಗಿದೆ. ಸೆಪ್ಟೆಂಬರ್ 6ರಂದು ಗ್ರ್ಯಾಂಡ್ ಪ್ರೀಮಿಯರ್ ನಡೆಸಲು ಸಜ್ಜಾಗಿರುವ ಬಿಗ್ ಬಾಸ್ ತಂಡಕ್ಕೆ ಅರಣ್ಯ ಹಾಗೂ ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರ ಹೇಳಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಬಿಗ್ ಬಾಸ್ ಕನ್ನಡ ಸೀಸನ್ 13ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಯಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪರಿಸರ ನಿಯಮಗಳ ಉಲ್ಲಂಘನೆ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
‘ನಿಯಮ ಪಾಲಿಸದಿದ್ದರೆ ಅನುಮತಿ ಇಲ್ಲ’
ಜಾಲಿವುಡ್ ಸ್ಟುಡಿಯೋ ಕಳೆದ ವರ್ಷ ವಿಧಿಸಲಾಗಿದ್ದ ದಂಡವನ್ನು ಇನ್ನೂ ಪಾವತಿಸಿಲ್ಲ. ಅಲ್ಲದೆ, ಪರಿಸರ ನಿಯಮಗಳಲ್ಲಿನ ಲೋಪಗಳನ್ನು ಸರಿಪಡಿಸಿಲ್ಲ ಹಾಗೂ ಎಸ್‌ಟಿಪಿ (STP) ಅಳವಡಿಕೆ ನಿಯಮಗಳನ್ನೂ ಪಾಲಿಸಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಪರಿಸರ ನಿಯಮಗಳ ಉಲ್ಲಂಘನೆಗಳನ್ನು ಸರಿಪಡಿಸಿಕೊಳ್ಳದಿದ್ದರೆ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೆ.6ರ ಗ್ರ್ಯಾಂಡ್ ಪ್ರೀಮಿಯರ್‌ಗೆ ಸಂಕಷ್ಟ?
ನಿನ್ನೆಯಷ್ಟೇ ಕಲರ್ಸ್ ಕನ್ನಡದ ಬಿಗ್ ಬಾಸ್ ತಂಡ ಸುದ್ದಿಗೋಷ್ಠಿ ನಡೆಸಿ ಸೀಸನ್ 13ರ ಕುರಿತು ಮಾಹಿತಿ ಹಂಚಿಕೊಂಡಿತ್ತು. ಸೆಪ್ಟೆಂಬರ್ 6ರಂದು ಅದ್ದೂರಿಯಾಗಿ ಗ್ರ್ಯಾಂಡ್ ಪ್ರೀಮಿಯರ್ ನಡೆಸಲು ಸಿದ್ಧತೆಗಳು ನಡೆಯುತ್ತಿರುವಾಗಲೇ ಪರಿಸರ ನಿಯಮಗಳ ವಿಚಾರ ಮುನ್ನೆಲೆಗೆ ಬಂದಿದೆ. ಹೀಗಾಗಿ ನಿಗದಿಯಂತೆ ಸೆಪ್ಟೆಂಬರ್ 6ರಂದು ಕಾರ್ಯಕ್ರಮ ಆರಂಭವಾಗಲಿದೆಯೇ ಎಂಬುದರ ಬಗ್ಗೆ ಇದೀಗ ಅನುಮಾನ ಮೂಡಿದೆ. ಕಾರ್ಯಕ್ರಮ ಆಯೋಜಕರು ಪರಿಸರ ಮಂಡಳಿಯ ನಿಯಮಗಳನ್ನು ಪಾಲಿಸಿ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.
ಕಳೆದ ವರ್ಷವೂ ಇದೇ ಸಮಸ್ಯೆ ;
ಕಳೆದ ವರ್ಷವೂ ಜಾಲಿವುಡ್ ಸ್ಟುಡಿಯೋಗೆ ಸಂಬಂಧಿಸಿದ ಪರಿಸರ ಉಲ್ಲಂಘನೆ ಹಾಗೂ ಕಾನೂನು ತೊಡಕುಗಳಿಂದಾಗಿ ಬಿಗ್ ಬಾಸ್ ಶೂಟಿಂಗ್ ಮತ್ತು ಪ್ರಸಾರಕ್ಕೆ ಸಮಸ್ಯೆ ಎದುರಾಗಿತ್ತು. ಈ ಬಾರಿ ಮತ್ತೆ ಅದೇ ರೀತಿಯ ಪರಿಸರ ನಿಯಮಗಳ ಉಲ್ಲಂಘನೆ ಆರೋಪ ಕೇಳಿಬಂದಿರುವುದರಿಂದ, ಬಿಗ್ ಬಾಸ್ ಸೀಸನ್ 13ರ ಗ್ರ್ಯಾಂಡ್ ಪ್ರೀಮಿಯರ್‌ಗೂ ಮುನ್ನ ಸ್ಟುಡಿಯೋ ಆಡಳಿತ ಮಂಡಳಿ ಲೋಪಗಳನ್ನು ಸರಿಪಡಿಸಿ ಅನುಮತಿ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಹೀಗಾಗಿ ಅದ್ಧೂರಿ ಆರಂಭಕ್ಕೆ ಸಜ್ಜಾಗಿದ್ದ ಬಿಗ್ ಬಾಸ್ ಸೀಸನ್ 13ಕ್ಕೆ ಇದೀಗ ಪರಿಸರ ನಿಯಮಗಳೇ ದೊಡ್ಡ ಸವಾಲಾಗಿ ಪರಿಣಮಿಸಿವೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm