ಬ್ರೇಕಿಂಗ್ ನ್ಯೂಸ್
11-09-26 02:59 pm HK News Staffer ಕರ್ನಾಟಕ
ಬೆಂಗಳೂರು , ಸೆಪ್ಟೆಂಬರ್ 11: ತಮ್ಮ ಮಕ್ಕಳು ವೈದ್ಯರಾಗಬೇಕು ಎಂಬ ಕನಸಿನಲ್ಲಿ ಅಪ್ಪ-ಅಮ್ಮಂದಿರು ಸಾಲ-ಸೋಲ ಮಾಡಿ ವೈದ್ಯಕೀಯ ಕಾಲೇಜುಗಳಿಗೆ ಸೇರಿಸುತ್ತಾರೆ. ಆದರೆ, ಇದೇ ಕಾಲೇಜು ಸಾಲದ ಸುಳಿಗೆ ಸಿಲುಕಿ ಎರಡು ತಿಂಗಳಿನಿಂದ ಬಂದ್ ಆಗಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಏನು? ಮಕ್ಕಳ ಶಿಕ್ಷಣಕ್ಕಾಗಿ ಹಣ ಹೊಂದಿಸಲು ಸಾಲ ಮಾಡಿರುವ ಪೋಷಕರ ಕನಸುಗಳ ಗತಿ ಏನು? ಇಂತಹ ಪ್ರಶ್ನೆಗಳು ಇದೀಗ ದೊಡ್ಡಬಳ್ಳಾಪುರದ ಖಾಸಗಿ ಆಯುರ್ವೇದ ಕಾಲೇಜೊಂದರ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡುತ್ತಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ, ದೇವನಹಳ್ಳಿ ಸಮೀಪದಲ್ಲಿರುವ ಖಾಸಗಿ ಆಯುರ್ವೇದ ಕಾಲೇಜು ಆತ್ರೇಯ ಆಯುರ್ವೇದ ವಿದ್ಯಾಲಯ ಕಳೆದ ಎರಡು ತಿಂಗಳಿಂದ ಬಂದ್ ಆಗಿದೆ. ಕಾಲೇಜು ನಿರ್ವಹಿಸುತ್ತಿದ್ದ ಸಂಸ್ಥೆ ಬ್ಯಾಂಕ್ನಿಂದ ಪಡೆದ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಸಿಟಿ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಕಾಲೇಜು ಸ್ವತ್ತನ್ನು ಸೀಜ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.
ಸೀಜ್ ಮಾಡಲು ಕಾರಣವೇನು?
ಮ್ಯಾನೇಜಿಂಗ್ ಟ್ರಸ್ಟಿ ಡಾ. ಪ್ರಶಾಂತ್ ಎಸ್. ಅವರ ನೇತೃತ್ವದ ಆತ್ರೇಯ ಆಯುರ್ವೇದ ವೈದ್ಯಕೀಯ ಕಾಲೇಜು ಸಂಸ್ಥೆಯು ಸಿಟಿ ಯೂನಿಯನ್ ಬ್ಯಾಂಕ್ನಿಂದ ಪಡೆದಿದ್ದ ಸಾಲದ ಮೊತ್ತವನ್ನು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡಿರಲಿಲ್ಲ ಎನ್ನಲಾಗಿದೆ. ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ SARFAESI ಕಾಯ್ದೆಯಡಿ ನೋಟಿಸ್ ಜಾರಿ ಮಾಡಿ, ನ್ಯಾಯಾಲಯದ ಅನುಮತಿಯೊಂದಿಗೆ ಕಾಲೇಜಿನ ಸ್ವತ್ತನ್ನು ತನ್ನ ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.
ಆದರೆ, ಬ್ಯಾಂಕ್ ಕೈಗೊಂಡಿರುವ ಈ ಕ್ರಮದ ವಿರುದ್ಧ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿಗಳು ಈಗಾಗಲೇ ಕರ್ನಾಟಕ ಹೈಕೋರ್ಟ್ ಹಾಗೂ ಸಾಲ ವಸೂಲಾತಿ ನ್ಯಾಯಾಧೀಕರಣದ (DRT) ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಂಸ್ಥೆ ಕಾನೂನು ಹೋರಾಟ ಮುಂದುವರಿಸಿದೆ.
500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ:
ಕಾಲೇಜು ಸೀಜ್ ಆಗಿರುವುದರಿಂದ ಇಲ್ಲಿ ವ್ಯಾಸಂಗ ಮಾಡುತ್ತಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ತರಗತಿಗಳು ನಡೆಯದೆ, ಪರೀಕ್ಷೆಗಳೂ ನಡೆಯದ ಸ್ಥಿತಿ ನಿರ್ಮಾಣವಾಗಿರುವುದರಿಂದ ವಿದ್ಯಾರ್ಥಿಗಳು ಮಾತ್ರವಲ್ಲದೆ ಅವರ ಪೋಷಕರೂ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಮಕ್ಕಳ ವೈದ್ಯಕೀಯ ಶಿಕ್ಷಣಕ್ಕಾಗಿ ದೊಡ್ಡ ಮೊತ್ತದ ಹಣ ವ್ಯಯಿಸಿರುವ ಪೋಷಕರಿಗೆ ಇದೀಗ ತಮ್ಮ ಮಕ್ಕಳ ಶಿಕ್ಷಣ ಮುಂದುವರಿಯುತ್ತದೆಯೇ, ಪರೀಕ್ಷೆಗಳನ್ನು ಯಾವಾಗ ಬರೆಯುತ್ತಾರೆ ಹಾಗೂ ಶೈಕ್ಷಣಿಕ ವರ್ಷಕ್ಕೆ ಏನಾಗುತ್ತದೆ ಎಂಬ ಪ್ರಶ್ನೆಗಳು ಎದುರಾಗಿವೆ.
₹4.5 ಲಕ್ಷ ಶುಲ್ಕ ವಸೂಲಿ ಆರೋಪ:
ಇದರ ನಡುವೆ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರವೇಶಾತಿ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಯಿಂದ ಸುಮಾರು ₹4.5 ಲಕ್ಷ ಶುಲ್ಕ ವಸೂಲಿ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇಷ್ಟೊಂದು ಮೊತ್ತದ ಶುಲ್ಕ ಪಡೆದಿದ್ದರೂ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಇದಲ್ಲದೆ, ನಿಯಮಾನುಸಾರ ಅಗತ್ಯ ಅನುಮತಿಗಳನ್ನು ಪಡೆಯದೆ ಕಾಲೇಜು ನಡೆಸಲಾಗುತ್ತಿದೆ ಎಂದು ಕೆಲವು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಕ್ಕಳ ವೈದ್ಯಕೀಯ ಶಿಕ್ಷಣದ ಕನಸು ನನಸಾಗಬೇಕು ಎಂಬ ಉದ್ದೇಶದಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಾವತಿಸಿರುವ ಪೋಷಕರು, ಇದೀಗ ಕಾಲೇಜು ಮುಚ್ಚಿರುವ ಹಿನ್ನೆಲೆಯಲ್ಲಿ ತಮ್ಮ ಹಣ ಹಾಗೂ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ.
ಕಾಲೇಜು ಆಡಳಿತ ಮಂಡಳಿ ಹಾಗೂ ಬ್ಯಾಂಕ್ ನಡುವಿನ ಸಾಲದ ವಿವಾದ ಕಾನೂನು ಹಂತದಲ್ಲಿರುವ ನಡುವೆಯೇ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ಅಡ್ಡಿಯಾಗದಂತೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂಬುದು ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರಮುಖ ಬೇಡಿಕೆಯಾಗಿದೆ.
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 01:56 pm
HK News Staffer
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm