ಬ್ರೇಕಿಂಗ್ ನ್ಯೂಸ್
11-09-26 05:50 pm HK News Staffer ಕರ್ನಾಟಕ
ಬೆಂಗಳೂರು ಸೆ.11: "ಕಸ್ತೂರಿ ರಂಗನ್ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್ 21 ರಿಂದ 23 ರ ವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಅರಣ್ಯ ಭವನದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ಅಧಿವೇಶನದಲ್ಲಿ ಎಲ್ಲ ಶಾಸಕರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮುಕ್ತವಾಗಿ ನೀಡಬೇಕು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದರು. ನವೆಂಬರ್ 1ರ ಒಳಗೆ ಪರವಾನಗಿ ಹೊಂದಿಲ್ಲದ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಅಕ್ರಮ ಬಂದೂಕು, ಶಸ್ತ್ರಗಳಿಂದಲೇ ಅರಣ್ಯ ಅಧಿಕಾರಿಗಳು ಬಲಿಯಾಗಿದ್ದಾರೆ ಎಂಬುದನ್ನು ಸರ್ಕಾರ ಗಂಭೀರ ಪರಿಗಣಿಸಿದೆ ಎಂದರು.
ಎಪಿಎಂಸಿ ಭೇಟಿಗೆ ಹೈಕೋರ್ಟ್ ಮೆಚ್ಚುಗೆ
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಮುಖ್ಯಮಂತ್ರಿಯವರ ಎಪಿಎಂಸಿ ಭೇಟಿ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ಕುರಿತು ಕೇಳಿದಾಗ, "ನಮ್ಮ ಕೆಲಸವನ್ನು ಗುರುತಿಸಿದ ಹೈಕೋರ್ಟ್ ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲ ಸಚಿವರಿಗೂ ಎಪಿಎಂಸಿಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದೇನೆ. ಏಕೆಂದರೆ ಸಾಮಾನ್ಯ ಜನರು ಯಾವುದೇ ಕಾರಣಕ್ಕೂ ತೊಂದರೆ ಅನುಭವಿಸಬಾರದು ಎಂಬುದು ಸರ್ಕಾರದ ನಿಲುವು" ಎಂದರು.
ಬಾಲಕಾರ್ಮಿಕರ ರಕ್ಷಣೆ ಪೊಲೀಸರ ಕರ್ತವ್ಯ
ಬಾಲ ಕಾರ್ಮಿಕರ ರಕ್ಷಣೆ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಬಗ್ಗೆ ಕೇಳಿದಾಗ, "ಬಾಲಕಾರ್ಮಿಕರ ರಕ್ಷಣೆ ವಿಚಾರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ದುರದೃಷ್ಟಕರ. ಮಕ್ಕಳನ್ನು ರಕ್ಷಿಸುವುದು ಕಾರ್ಮಿಕ ಇಲಾಖೆ ಮಾತ್ರವಲ್ಲ, ಪೊಲೀಸ್ ಇಲಾಖೆಯ ಜವಾಬ್ದಾರಿಯೂ ಹೌದು. ಬಾಲ ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು" ಎಂದರು.
ಜಾರಕಿಹೊಳಿ ವಿರುದ್ಧ ರಾಜಕೀಯ ಟಾರ್ಗೆಟ್
"ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಧೈರ್ಯ ತುಂಬಿದ್ದೇನೆ. ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲಿಯೇ ವ್ಯವಹಾರ ನಡೆಸುತ್ತಿದ್ದಾರೆ" ಎಂದು ಹೇಳಿದರು. "ಇದು ರಾಜಕೀಯವಾಗಿ ನಡೆಯುತ್ತಿರುವ ಬೆಳವಣಿಗೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಹಾಗೂ ವಿರೋಧ ಪಕ್ಷದವರನ್ನು ಗುರಿ ಮಾಡಲಾಗುತ್ತಿದೆ. ಇನ್ನೂ ಮೂರು–ನಾಲ್ಕು ಜನರನ್ನು ಗುರಿ ಮಾಡುವ ಸಾಧ್ಯತೆ ಇದೆ ಎಂಬ ಅರಿವು ನನಗಿದೆ" ಎಂದರು.
"ಬಿಜೆಪಿ ನಾಯಕರಿಗೆ ಸಂಬಂಧಿಸಿದ ಹಣ ವರ್ಗಾವಣೆ ಹಾಗೂ ವಿದೇಶಿ ಖಾತೆಗಳಿಗೆ ಹಣ ಹೋಗಿರುವ ಆರೋಪಗಳಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ನಾಯಕರ ಮೇಲಷ್ಟೇ ತನಿಖಾ ಸಂಸ್ಥೆಗಳ ಕ್ರಮ ನಡೆಯುತ್ತಿದೆ" ಎಂದು ಹೇಳಿದರು.
ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟ
ವಂದೇ ಮಾತರಂ ಹಾಡಿನ ವಿಚಾರವಾಗಿ ಕೇಳಿದಾಗ, "ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಾಂಗ್ರೆಸ್ ಗೌರವ ನೀಡುತ್ತದೆ" ಎಂದು ಹೇಳಿದರು.
"ನಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ತಮ್ಮ ಕಾಲದಲ್ಲಿಯೂ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರದ ವಶಕ್ಕೆ ನೀಡಲು ಕರೆ ನೀಡಿದ್ದರು. ಇದರಿಂದ ಸಾವಿರಾರು ಜನ ಮುಂದೆ ಬಂದು ಸರ್ಕಾರದ ವಶಕ್ಕೆ ನೀಡಿದರು" ಎಂದರು.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm