ಬ್ರೇಕಿಂಗ್ ನ್ಯೂಸ್
12-09-26 05:56 pm HK News Staffer ಕರ್ನಾಟಕ
ಬೆಂಗಳೂರು, ಸೆ.12: ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟಿದ್ದೆ. ಅಧಿಕಾರ ಸಿಕ್ಕಿದ ಬಳಿಕ ನನ್ನ ಮುಖ ನೋಡಲಿಲ್ಲ. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಸೆ.13ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರುತ್ತಿದ್ದೇನೆ ಎಂದು ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯ ಹಿಂದುಳಿದ ವರ್ಗ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದು, ಈಗ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯನಾಗಿ ಮೂರು ಬಾರಿ ಮತ್ತು ಎರಡು ಬಾರಿ ಶಾಸಕನಾಗಿ 40 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ ಎಂದರು.
ಹತ್ತು ವರ್ಷಗಳಿಂದ ಬಿಜೆಪಿಗೆ ನನ್ನನ್ನು ಸಮರ್ಪಿಸಿಕೊಂಡಿದ್ದೆ. ಅದಕ್ಕೆ ಯಾವುದೇ ಬೆಲೆ ಸಿಗದೇ ಇದ್ದುದ್ದರಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು. ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮತ್ತು ನನ್ನ ಕಾರ್ಯಕರ್ತರನ್ನು ದೂರ ಮಾಡಿದರು. ನನ್ನ ವಿರುದ್ದ ಪಿತೂರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಸುರೇಶ್ ಕುಮಾರ್, ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗೋಪಾಲಯ್ಯ ಪರ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದೆ. ಗೋಪಾಲಯ್ಯ ಸೇರಿದಂತೆ 17 ಮಂದಿ ಶಾಸಕರು ಬಿಜೆಪಿ ಸೇರಿದಾಗ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನೀವು ಸಹಕಾರ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಆರೆಸ್ಸೆಸ್ ಮುಖಂಡ ಬಿ.ಎಲ್.ಸಂತೋಷ್ ತಮ್ಮನ್ನು ಮನವೊಲಿಸಿದರು. ಪಕ್ಷಕ್ಕಾಗಿ ತ್ಯಾಗ ಮಾಡಿದ ತಮಗೆ ನಂತರ ಜವಾಬ್ದಾರಿ ನೀಡುವ ವಿಚಾರದಲ್ಲಿ ಬಿಜೆಪಿ ನಾಯಕರು ಜಾಣ ಮೌನ ವಹಿಸಿದ್ದಾರೆ. ಸರಕಾರ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಕಡೆ ನೋಡಲಿಲ್ಲ. ಕೆಲಸ ಮಾಡುವವರಿಗೆ ಬಿಜೆಪಿಯಲ್ಲಿ ಬೆಲೆಯಿಲ್ಲ. ಹಿಂಬಾಲಕರಿಗೆ ಮಾತ್ರ ಅವಕಾಶ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನಲ್ಲಿ ನನ್ನ ಶ್ರಮವಿದೆ. ನಿಗಮ, ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂಬ ಮನವಿಗೆ ಕಿವಿಗೊಡಲಿಲ್ಲ. ಕಾಂಗ್ರೆಸ್ ಪಕ್ಷ ನನಗೆ ಹೆಚ್ಚಿನ ಅವಕಾಶ ನೀಡಿತ್ತು. ಆದರೂ ಬಿಜೆಪಿ ಸೇರಿದೆ ಎಂದರು.
ಇದೀಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉತ್ತಮ ಸರಕಾರವಿದ್ದು, ಬಿ.ಕೆ.ಹರಿಪ್ರಸಾದ್ ಸಾರಥ್ಯದಲ್ಲಿ ಪಕ್ಷ ಸಂಘಟನೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಆರೆಸ್ಸೆಸ್ ತೀರ್ಮಾನವೇ ಅಂತಿಮವಾಗಿದೆ. ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ರಾಜ್ಯದ ಸಮಸ್ಯೆಗಳಿಗೆ ಬಿಜೆಪಿ ಸಂಸದರು ಸ್ಪಂದಿಸುವುದಿಲ್ಲ. ಹೀಗಾಗಿ ನನ್ನ ಮತ್ತು ಜೊತೆಯಲ್ಲಿ ಇರುವ ಸ್ನೇಹಿತರು, ಕಾರ್ಯಕರ್ತರ ಜೊತೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
30-10-26 12:51 pm
HK News Staffer
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
30-10-26 11:01 pm
HK News Staffer
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಬೆಂಗಳೂ...
30-10-26 05:13 pm
ಶಿವಮೊಗ್ಗದಿಂದ ಮಂಗಳೂರಿಗೆ 1.15 ಕೋಟಿ ನಗದು ರವಾನೆ ;...
29-10-26 11:02 pm