ಬ್ರೇಕಿಂಗ್ ನ್ಯೂಸ್
15-09-26 04:46 pm HK News Staffer ಕರ್ನಾಟಕ
ಬೆಂಗಳೂರು, ಸೆ.15:ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆ ವಿಚಾರ ಇದೀಗ ಮತ್ತೊಂದು ಹಂತದ ರಾಜಕೀಯ ಸಂಘರ್ಷಕ್ಕೆ ತಿರುಗಿದೆ. ಮಸೀದಿ ಮುಂದೆ ಗಣೇಶನ ಮೂರ್ತಿ ಮೆರವಣಿಗೆ ನಡೆಸಬಾರದು ಎಂದು ಪೊಲೀಸ್ ಇನ್ಸ್ಪೆಕ್ಟರ್ ನೀಡಿದ್ದ ಸೂಚನೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಇನ್ಸ್ಪೆಕ್ಟರ್ ವಿರುದ್ಧ ಕಿಡಿಕಾರಿದ್ದರು.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಇಮ್ರಾನ್ ಪಾಷಾ, ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಇಮ್ರಾನ್ ಪಾಷಾ, "ಲೇ ಸಿಂಹ..ಮುಸ್ಲಿಮರ ಬಗ್ಗೆ ಮಾತನಾಡುವುದನ್ನು ಮುಂದುವರಿಸಿದರೆ ಹುಷಾರ್. ಇದೇ ರೀತಿ ಮಾತನಾಡುತ್ತಾ ಹೋದರೆ ಮೊಟ್ಟೆ, ಚಪ್ಪಲಿ ಏಟು ತಿನ್ನಬೇಕಾಗುತ್ತದೆ" ಎಂದು ಇಮ್ರಾನ್ ಪಾಷಾ ಎಚ್ಚರಿಕೆ ನೀಡಿದ್ದಾರೆ.
ಇಷ್ಟಕ್ಕೇ ನಿಲ್ಲದ ಇಮ್ರಾನ್ ಪಾಷಾ, “ನಿನ್ನಂತ ನಾಲಾಯಕ್, ಥರ್ಡ್ ಕ್ಲಾಸ್ ವ್ಯಕ್ತಿ ಕರ್ನಾಟಕದಲ್ಲಿ ಎಲ್ಲೂ ಇಲ್ಲ. ಹಿಂದೂ-ಮುಸ್ಲಿಂ ಬಾಂಧವರ ನಡುವೆ ವೈಷಮ್ಯ ಹುಟ್ಟುಹಾಕುವ ಕೆಲಸ ಮಾಡಿದರೆ ಚಪ್ಪಲಿ ಏಟು, ಮೊಟ್ಟೆ ಏಟು ಖಚಿತ” ಎಂದು ಹೇಳಿದ್ದಾರೆ.
ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ನಿನ್ನಂತಹ ಒಂದು ಲಕ್ಷ ಜನ ನಮ್ಮ ಎದುರಿಗೆ ಬಂದರೂ, ನಮ್ಮ ಸಮುದಾಯದ ಒಂದು ಕೂದಲನ್ನೂ ಕಿತ್ತುಕೊಳ್ಳಲು ನಿನ್ನಿಂದ ಆಗಲ್ಲ” ಎಂದು ಸವಾಲಿನ ಧಾಟಿಯಲ್ಲಿ ಮಾತನಾಡಿದ್ದಾರೆ.
“ನಮ್ಮ ಮುಸ್ಲಿಂ ಹೆಣ್ಮಕ್ಕಳೇ ನಿನ್ನನ್ನು ಹೊಡೆದು ಸ್ಮಶಾನದೊಳಗೆ ಹಾಕುತ್ತಾರೆ. ನಿನ್ನಂತಹ ಸಾವಿರ ಜನ ಬಂದರೂ ನಮ್ಮ ಸಮುದಾಯದ ಒಂದು ಕೂದಲನ್ನೂ ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದ ಪೊಲೀಸ್ ಸೂಚನೆ...ಪ್ರತಾಪ್ ಸಿಂಹರ ಆಕ್ರೋಶ...
ಇದೀಗ ಜಮೀರ್ ಆಪ್ತ ಇಮ್ರಾನ್ ಪಾಷಾ ಅವರ ತೀವ್ರ ಹೇಳಿಕೆ...ಹೀಗೆ ಗಣೇಶೋತ್ಸವದ ವಿಚಾರ ನಿಧಾನವಾಗಿ ರಾಜಕೀಯ ಸಂಘರ್ಷವಾಗಿ ಮಾರ್ಪಡುತ್ತಿದ್ದು, ಪರ-ವಿರೋಧದ ಹೇಳಿಕೆಗಳು ಮತ್ತಷ್ಟು ಕಾವು ಪಡೆದುಕೊಳ್ಳುತ್ತಿವೆ.
ಇಮ್ರಾನ್ ಪಾಷಾ ಹೇಳಿಕೆಗೆ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೇಳಿಕೆಗಳ ಮೂಲಕವೇ ರಾಜ್ಯದ ರಾಜಕೀಯ ವಾತಾವರಣ ಮತ್ತಷ್ಟು ಬಿಸಿಯಾಗುತ್ತಿದೆಯೇ ಎಂಬ ಚರ್ಚೆ ಶುರುವಾಗಿದೆ.
The controversy over the Ganesh procession in T. Narasipur has escalated into another round of political confrontation. BJP leaders had strongly objected to a police inspector’s instruction not to take the Ganesh idol procession in front of a mosque. Former MP Pratap Simha had also criticised the inspector over the directive.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm