Pradeep Eshwar, Pratap Simha: ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಸವಾಲ್ ; ‘ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ’ ಎಂದು ಕಿಡಿ!

15-09-26 09:13 pm       HK News Staffer   ಕರ್ನಾಟಕ

ಗಣೇಶ ಚತುರ್ಥಿ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ‘ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ ಹೇಳಿಕೆ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ.

ಬೆಂಗಳೂರು, ಸೆ.15: ಗಣೇಶ ಚತುರ್ಥಿ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ‘ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ ಹೇಳಿಕೆ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ.

ಇನ್ಸ್‌ಪೆಕ್ಟರ್ ಧನಂಜಯ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ರೀತಿ ಮತ್ತೆ ಮಾತನಾಡಿದರೆ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಅವರು ಎಚ್ಚರಿಕೆ ನೀಡಿದ್ದರು.

ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ‘ಪೊಲೀಸ್ ಠಾಣೆಗೆ ನುಗ್ಗಿದ ಬಳಿಕ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು’ ಎಂದು ತಿರುಗೇಟು ನೀಡಿದ್ದರು. ಇದೀಗ ಈ ವಿವಾದಕ್ಕೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿಯಾಗಿದ್ದು, ಪ್ರತಾಪ್ ಸಿಂಹ ಅವರಿಗೆ ನೇರವಾಗಿಯೇ ಸವಾಲು ಹಾಕಿದ್ದಾರೆ. ‘ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ’ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೆ, ‘ಮೈಸೂರಿನ ಗಲ್ಲಿ ರೌಡಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಧಮ್ಕಿ ಹಾಕಿದ್ದಾನೆ’ ಎಂದು ಪ್ರತಾಪ್ ಸಿಂಹ ಅವರನ್ನು ಉಲ್ಲೇಖಿಸಿ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಇದೀಗ ಇಬ್ಬರು ನಾಯಕರ ನಡುವಿನ ಈ ಮಾತಿನ ಸಮರ ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

Remarks by T. Narasipur Police Station Inspector Dhananjay during a peace meeting held ahead of Ganesh Chaturthi have triggered a major political war of words between the ruling Congress and opposition BJP. The inspector had reportedly warned that he would “teach a lesson” if firecrackers were burst in front of a mosque.