ಬ್ರೇಕಿಂಗ್ ನ್ಯೂಸ್
23-09-26 11:02 pm HK News Desk ಕರ್ನಾಟಕ
ಬೆಂಗಳೂರು, ಸೆ.23: ಕರಾವಳಿ ಭಾಗದಲ್ಲಿ ಸಮುದ್ರ ಸೇರುವ ನೀರನ್ನು ಸಾಧ್ಯವಾದಷ್ಟು ಸಂಗ್ರಹಿಸಿ, ಸ್ಥಳೀಯ ಬಳಕೆಗೆ ಸದ್ಬಳಕೆ ಮಾಡಿಕೊಳ್ಳಲು ವೈಜ್ಞಾನಿಕ ಮಾಸ್ಟರ್ ಪ್ಲಾನ್ ರೂಪಿಸುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನೀರು ಸಮುದ್ರ ಸೇರಿದರೆ ಹೋದಂತೆಯೇ. ಎಲ್ಲೆಲ್ಲಿ ನೀರನ್ನು ತಡೆದು ಬಳಸಿಕೊಳ್ಳಲು ಸಾಧ್ಯವೋ ಅಲ್ಲಲ್ಲಿ ಬಳಸಿಕೊಳ್ಳಬೇಕಾಗಿದೆ. ಇದಕ್ಕಾಗಿ ಸಣ್ಣ ಅಣೆಕಟ್ಟುಗಳು, ಕಿಂಡಿ ಅಣೆಕಟ್ಟುಗಳ ನಿರ್ಮಾಣ ಹಾಗೂ ಉಪನದಿಗಳ ನೀರು ಸಂಗ್ರಹಕ್ಕೆ ವೈಜ್ಞಾನಿಕವಾಗಿ ಯೋಜನೆ ರೂಪಿಸಬೇಕು” ಎಂದು ಹೇಳಿದರು.
ಕರಾವಳಿಯ ಸಣ್ಣ ನದಿಗಳು ಹಾಗೂ ಉಪನದಿಗಳಿಗೆ ಸಣ್ಣ ಅಣೆಕಟ್ಟು ನಿರ್ಮಿಸುವ ‘ಪಶ್ಚಿಮ ವಾಹಿನಿ’ ಯೋಜನೆಯನ್ನು ಪುನರಾರಂಭಿಸುವಂತೆ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದರು. ಸಣ್ಣ ನೀರಾವರಿ ಇಲಾಖೆ ಸಮೀಕ್ಷೆ ನಡೆಸಿ, ಈಗಿರುವ ಅಣೆಕಟ್ಟುಗಳು, ಇನ್ನಷ್ಟು ಕಡೆ ನೀರು ಸಂಗ್ರಹಿಸಲು ಸಾಧ್ಯ ಎಂಬುವುದನ್ನು ಹಾಗೂ ಇದಕ್ಕಾಗಿ ಅಗತ್ಯವಿರುವ ಸ್ಥಳಗಳನ್ನು ಗುರುತಿಸಬೇಕು ಎಂದು ಹೇಳಿದರು.
ಸಣ್ಣ ಅಣೆಕಟ್ಟುಗಳಿಂದ ಸ್ಥಳೀಯ ರೈತರಿಗೆ ನೀರಿನ ಲಭ್ಯತೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗಲಿದೆ. ಜತೆಗೆ, ಕರಾವಳಿಯ ಹಳ್ಳ-ಕೊಳ್ಳಗಳಲ್ಲಿ ತುಂಬಿರುವ ಮರಳು ಮತ್ತು ಹೂಳು ತೆರವುಗೊಳಿಸಲು ಪ್ರತ್ಯೇಕ ಮರಳು ನೀತಿ ರೂಪಿಸಬೇಕು ಎಂದು ಆಗ್ರಹಿಸಿದರು.
ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುಂಬೆ ಅಣೆಕಟ್ಟಿನ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವಂತೆ ಶಾಸಕ ಡಿ. ವೇದವ್ಯಾಸ ಕಾಮತ್ ಮನವಿ ಮಾಡಿದರು. ಕೈಗಾರಿಕೆಗಳಿಗೆ ಸಮುದ್ರದ ನೀರನ್ನು ಶುದ್ಧೀಕರಿಸಿ ಪೂರೈಸುವ ಪ್ರಾಯೋಗಿಕ ಯೋಜನೆ ರೂಪಿಸುವಂತೆಯೂ ಸಲಹೆ ನೀಡಿದರು.
ಮುಖ್ಯ ನದಿಗಳಿಗೆ ಸೇರುವ ಉಪನದಿಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಿದರೆ ನೀರಿನ ಸಂಗ್ರಹದ ಜತೆಗೆ ಉಪ್ಪುನೀರು ನುಗ್ಗುವುದನ್ನೂ ತಡೆಯಬಹುದು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ವೈದ್ಯ ಸಲಹೆ ನೀಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅವರು, "ಸಂಬಂಧಿಸಿದ ಇಲಾಖೆಗಳು ಒಟ್ಟಾಗಿ ಕುಳಿತು ಕರಾವಳಿಯ ನೀರು ಸಂರಕ್ಷಣೆ, ಸಂಗ್ರಹ ಹಾಗೂ ಬಳಕೆಗೆ ಅಗತ್ಯವಿರುವ ಸ್ಥಳಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಸಮಗ್ರ ಯೋಜನೆ ರೂಪಿಸಬೇಕು" ಎಂದು ತಿಳಿಸಿದರು.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm