ಬ್ರೇಕಿಂಗ್ ನ್ಯೂಸ್
03-10-26 05:30 pm HK News Staffer ಕರ್ನಾಟಕ
ಬೆಂಗಳೂರು, ಅ.03 : "ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.
ಬರ ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದರು.
ಕರ್ನಾಟಕ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ 240 ತಾಲ್ಲೂಕುಗಳ ಪೈಕಿ 217 ತಾಲ್ಲೂಕುಗಳನ್ನು ಬರ ಪೀಡಿತವಾಗಿವೆ. ಅದರಲ್ಲಿ ಘೋಷಣೆಯಾಗಿರುವ 177 ತಾಲ್ಲೂಕುಗಳಲ್ಲಿ ಒಟ್ಟು 46,324.50 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಸರ್ಕಾರ ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ, 3,701 ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಿತ್ತು. ಈಗ ಪರಿಷ್ಕೃತ ಪಟ್ಟಿಯಲ್ಲಿ ಘೋಷಣೆಯಾಗಿರುವ 177 ಬರ ಪೀಡಿತ ತಾಲ್ಲೂಕುಗಳಿಗೆ ಒಟ್ಟು 7,142.64 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ.
ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿ
"ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಲಾಗಿದೆ" ಎಂದು ತಿಳಿಸಿದರು. ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಬೇಕು" ಎಂದು ಮನವಿ ಮಾಡಿದರು.
ಆಘಾತಕಾರಿ ಪರಿಸ್ಥಿತಿ
"ನನ್ನ ಹಾಗೂ ಉಪ ಮುಖ್ಯಮಂತ್ರಿ ಡಾ. ಪರಮೇಶ್ವರ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟು ತೊಂದರೆಗೊಳಗಾಗಿರುವುದನ್ನು ನೋಡಿಲ್ಲ. ಇದು ಅತ್ಯಂತ ಆಘಾತಕಾರಿ ಪರಿಸ್ಥಿತಿ. ಜನಪ್ರತಿನಿಧಿಗಳು ಹಾಗೂ ರೈತರ ಸಮಸ್ಯೆಗಳನ್ನು ಅರಿಯಲು ವಿಶೇಷ ಅಧಿವೇಶನ ಕರೆಯಲಾಗಿತ್ತು. 150 ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಮಾತನಾಡಿದರು" ಎಂದು ವಿವರಿಸಿದರು.
"ರಾಜ್ಯದ ಕೃಷ್ಣಾ ಜಲಾನಯನ ಪ್ರದೇಶ ಹೊರತು ಪಡಿಸಿ ಎಲ್ಲ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆ ಇದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆಯಾಗಿದೆ. ಅದಾಗ್ಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಸಿ ಆದೇಶ ನೀಡುತ್ತಿದೆ. ನಗರ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ಎದುರಾಗಿದೆ. ರೈತರಿಗೆ ರಾಜ್ಯ ಸರ್ಕಾರದ ಹಂತದಲ್ಲಿ 2500 ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ. ಆದರೆ ಕೇಂದ್ರದಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷಿಸುತ್ತಿದ್ದೇವೆ" ಎಂದರು.
"ರಾಜ್ಯ ಸರ್ಕಾರದ ಎಲ್ಲ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳೂ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ, ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಾನ್ಯ ಪ್ರಧಾನಮಂತ್ರಿಯವರು ಬರ ಪರಿಸ್ಥಿತಿಯ ಕುರಿತು ರಾಜ್ಯಕ್ಕೆ ಭೇಟಿ ನೀಡಿದಾಗ ಮುನ್ನೆಚ್ಚರಿಕೆ ನೀಡಿದ್ದರು. ಅದರಂತೆ ನಾನೂ ಸಚಿವ ಸಂಪುಟ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನು. ರೈತರಿಗೂ ಬಿತ್ತನೆ ಕುರಿತು ಮಾರ್ಗದರ್ಶನ ನೀಡಲಾಗಿತ್ತು" ಎಂದು ವಿವರಿಸಿದರು.
"ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕಬ್ಬು ಬೆಳೆಗಾರರು ಹೆಚ್ಚಿನ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ಅಂತೆಯೇ ಹಾಲು ಉತ್ಪಾದಕರೂ ಕನಿಷ್ಠ 10 ರೂ. ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಈ ಸವಾಲಿನ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡೋಣ" ಎಂದು ಕರೆ ನೀಡಿದರು.
ವಸ್ತುನಿಷ್ಠ ವರದಿ ಸಲ್ಲಿಕೆ: ಕೇಂದ್ರ ತಂಡ ಮುಖ್ಯಸ್ಥರ ಭರವಸೆ
ಮುಖ್ಯಮಂತ್ರಿಗಳ ಮನವಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು ಅವರು ಮಾತನಾಡಿ, "ತಾವು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡಿ ವಸ್ತುಸ್ಥಿತಿ ಅರಿಯುವುದರೊಂದಿಗೆ ದತ್ತಾಂಶಗಳನ್ನೂ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ಪಡೆದುಕೊಂಡು ವಸ್ತುನಿಷ್ಠ ವರದಿ ಸಲ್ಲಿಸುವುದಾಗಿ" ತಿಳಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಉಮಾ ಮಹಾದೇವನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
03-10-26 01:00 pm
HK News Staffer
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
03-10-26 08:46 pm
HK News Staffer
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm
Mumbai police, gold chain: ಚಿನ್ನದ ಸರ ನುಂಗಿದ ಕ...
02-10-26 10:19 pm