ಬ್ರೇಕಿಂಗ್ ನ್ಯೂಸ್
07-10-26 10:45 pm HK News Staffer ಕರ್ನಾಟಕ
ಬೆಂಗಳೂರು, ಅ.7: ರಾಜ್ಯದ ಜನರು ಸತ್ತರೆ ₹5 ಲಕ್ಷ ಕೊಟ್ಟು ಕೈ ತೊಳೆದುಕೊಳ್ಳುವ ಸರ್ಕಾರ ಒಬ್ಬೊಬ್ಬ ಶಾಸಕರ ಮತ್ತು ಅವರ ಕುಟುಂಬಸ್ಥರ ವೈದ್ಯಕೀಯ ವೆಚ್ಚಕ್ಕಾಗಿ ಕೋಟಿ, ಕೋಟಿ ರೂಪಾಯಿ ಖರ್ಚು ಮಾಡ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಶಾಸಕರು ತಮ್ಮ ಕುಟುಂಬಸ್ಥರ ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ಲಕ್ಷಾಂತರ ರೂಪಾಯಿ ಬಿಲ್ ತೋರಿಸಿ ಸರ್ಕಾರದಿಂದ ಕ್ಲೈಮ್ ಮಾಡಿಕೊಂಡಿದ್ದಾರೆ.
2023ರ ಮೇ 20ರಿಂದ 2026ರ ಸೆಪ್ಟೆಂಬರ್ 30ರ ವರೆಗಿನ ಅವಧಿಯಲ್ಲಿ ಕರ್ನಾಟಕ ವಿಧಾನಸಭೆಯ ಒಟ್ಟು 69 ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರ ವೈದ್ಯಕೀಯ ಚಿಕಿತ್ಸೆಯ ನೆಪದಲ್ಲಿ ಏಳು ಕೋಟಿಗೂ ಹೆಚ್ಚು ಹಣವನ್ನು ಸರ್ಕಾರದಿಂದ ಪಡೆದುಕೊಂಡಿದ್ದಾರೆ. ಕರ್ನಾಟಕ ಶಾಸಕಾಂಗದ ನಿಯಮಗಳ ಪ್ರಕಾರ ಶಾಸಕರು ಹಾಗೂ ಅವರ ಕುಟುಂಬಸ್ಥರು ವೈದ್ಯಕೀಯ ವೆಚ್ಚವನ್ನು ಸರ್ಕಾರದಿಂದ ಭರಿಸಿಕೊಳ್ಳಲು ಕಾನೂನಿನ ಚೌಕಟ್ಟಿನಲ್ಲಿ ಅವಕಾಶವಿದೆ. ಇದನ್ನೇ ಮುಂದಿಟ್ಟು ಆಡಳಿತ ಮತ್ತು ವಿರೋಧ ಪಕ್ಷಗಳ ಪ್ರಮುಖ ಶಾಸಕರು ಲಕ್ಷಾಂತರ ರೂಪಾಯಿ ಪಾವತಿ ಮಾಡಿಸಿದ್ದಾರೆ.


ಬೇಲೂರು ಶಾಸಕ ಎಚ್.ಕೆ.ಸುರೇಶ್ ತನ್ನ ಹಾಗೂ ಕುಟುಂಬದ ವೈದ್ಯಕೀಯ ಚಿಕಿತ್ಸೆಗಾಗಿ ಬರೋಬ್ಬರಿ ₹98,78,325 ಮೊತ್ತವನ್ನು ಎರಡು ವರ್ಷದಲ್ಲಿ ಮರುಪಾವತಿ ಮಾಡಿಕೊಂಡಿದ್ದು ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಚಾಮರಾಜ ಶಾಸಕ ಕೆ.ಹರೀಶ್ ಗೌಡ ಕುಟುಂಬದವರು ₹85,91,139 ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ತನ್ನ ಕುಟುಂಬದ ವೈದ್ಯಕೀಯ ವೆಚ್ಚವಾಗಿ ₹85,02,261 ಹಣ ಪಾವತಿ ಮಾಡಿಸಿಕೊಂಡಿದ್ದಾರೆ.
ಹುಕ್ಕೇರಿ ಕ್ಷೇತ್ರದ ಶಾಸಕ ನಿಖಿಲ್ ಉಮೇಶ್ ಕತ್ತಿ ಅವರು ಕೇವಲ ₹2,349 ಮರುಪಾವತಿ ಮಾಡಿಸಿಕೊಳ್ಳುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ₹69,78,625, ಎಸ್. ಸುರೇಶ್ ಕುಮಾರ್ ₹22,26,082, ಕೆ. ಗೋಪಾಲಯ್ಯ ₹21,05,469, ಎಚ್.ಡಿ.ರೇವಣ್ಣ ₹13,02,425, ಬಸವರಾಜ ಬೊಮ್ಮಾಯಿ (ಮಾಜಿ ಮುಖ್ಯಮಂತ್ರಿ) ₹10,45,657, ಆರಗ ಜ್ಞಾನೇಂದ್ರ (ಮಾಜಿ ಗೃಹ ಸಚಿವ) ₹10,21,631, ಲಕ್ಷ್ಮಣ ಸವದಿ ₹4,86,848, ಡಾ.ಸಿ. ಎನ್. ಅಶ್ವತ್ಥ ನಾರಾಯಣ ₹4,58,240 ಹಣವನ್ನು ಪಡೆದ ಗಣ್ಯರಾಗಿದ್ದಾರೆ, ಉಳಿದಂತೆ, ಚಿಕಿತ್ಸೆ ನೆಪದಲ್ಲಿ ಸರ್ಕಾರದಿಂದ ಹಣ ಭರಿಸಿಕೊಂಡವರ ಪಟ್ಟಿ ಉದ್ದ ಇದೆ.
ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಆರ್ಥಿಕವಾಗಿ ಸಬಲರಾಗಿರುವ ಜನಪ್ರತಿನಿಧಿಗಳೇ ಕೋಟ್ಯಂತರ ರೂಪಾಯಿ ಮೊತ್ತವನ್ನು ಸರ್ಕಾರಿ ಖಜಾನೆಯಿಂದ ಮರುಪಾವತಿ ಪಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಿಂದ ಇಷ್ಟೊಂದು ವೆಚ್ಚವನ್ನು ಸರ್ಕಾರವೇ ಭರಿಸುವಂತಾಗಿದೆ.
While financial assistance of ₹5 lakh is often sought for families of ordinary citizens who die in accidents, the government has reportedly spent ₹7.46 crore of taxpayers’ money over the past two years towards medical treatment expenses of legislators and their family members.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm