ಬ್ರೇಕಿಂಗ್ ನ್ಯೂಸ್
13-10-26 04:53 pm HK News Staffer ಕರ್ನಾಟಕ
ಬೆಂಗಳೂರು, ಅ.13: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದ ವೈರಲ್ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ಆರೋಪಗಳ ಪ್ರಸಾರ ಹಾಗೂ ಹಂಚಿಕೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಬೆಂಗಳೂರಿನ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ (ಸಿಸಿಎಚ್-18) ಅರ್ಜಿ ಸಲ್ಲಿಸಿದ್ದಾರೆ.
ವಿವಾದಿತ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಳ್ಳದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಹಾಗೂ ಇತರ ಜಾಲತಾಣದ ವೇದಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಈ ವಿಷಯಗಳು ಮಾನಹಾನಿಕರವಾಗಿದ್ದು, ಸುಳ್ಳು ಆರೋಪಗಳನ್ನು ಒಳಗೊಂಡಿವೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಒಳಗೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ಸಿದ್ದರಾಮಯ್ಯ ಕೋರ್ಟ್ ಮೆಟ್ಟಿಲೇರಿದ್ದು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ವಿಚಾರವು ಕಾಂಗ್ರೆಸ್ ಒಳಗಡೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ತನಿಖೆಗೆ ಆದೇಶಿಸಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆ ಎನ್ನುವ ಸತ್ಯ ಗೊತ್ತಾಗಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರಗಳನ್ನು ನಡೆಸಲಾಗುತ್ತಿದ್ದು ಇದರ ವಿರುದ್ಧ ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
18ನೇ ಸಿಸಿಎಚ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿ, ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮಗಳ ವಿರುದ್ಧ ದೂರು ನೀಡಲಾಗಿದೆ. ಸೆಪ್ಟೆಂಬರ್ 27ರಂದು 'ಕರ್ನಾಟಕ ಹನಿಟ್ರ್ಯಾಪ್ ನೆಕ್ಸಸ್ ಪಾರ್ಟ್ 1' ಮತ್ತು ಅಕ್ಟೋಬರ್ 2ರಂದು 'ಫ್ರೀಡಂ ಟಿವಿ ಕನ್ನಡ'ದಲ್ಲಿ ಪ್ರಸಾರವಾದ ವಿಡಿಯೋಗಳು ಯಾವುದೇ ಅಧಿಕೃತ ದೂರು ಅಥವಾ ಸಾಕ್ಷ್ಯಗಳಿಲ್ಲದೆ ತಮ್ಮ ಗೌರವಕ್ಕೆ ಧಕ್ಕೆ ತರುವಂತಿವೆ ಎಂದು ದೂರು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm