ಬ್ರೇಕಿಂಗ್ ನ್ಯೂಸ್
14-10-26 10:35 am HK News Staffer ಕರ್ನಾಟಕ
ಬೆಂಗಳೂರು, ಅ.14: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹರಿಯಬಿಟ್ಟು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ವಿಡಿಯೋ ಪ್ರಸಾರದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ತಮ್ಮ ವಿರುದ್ಧ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದರು. ದೂರಿನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಹಂಚಿಕೊಂಡಿರುವ ಕೆಲವು ಖಾತೆಗಳ ವಿವರಗಳನ್ನೂ ಒದಗಿಸಿದ್ದರು. ಈ ದೂರಿನ ಆಧಾರದ ಮೇಲೆ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿವಾದಿತ ವಿಡಿಯೋಗಳನ್ನು ಹಂಚಿಕೊಂಡಿರುವ ಖಾತೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ವಿಡಿಯೋಗಳನ್ನು ಮೊದಲು ಅಪ್ಲೋಡ್ ಮಾಡಿದವರು ಯಾರು, ಅವುಗಳನ್ನು ಸೃಷ್ಟಿಸಿದ ಮೂಲ ಯಾವುದು ಮತ್ತು ಪ್ರಸಾರದ ಹಿಂದೆ ಯಾರಾದರೂ ಸಂಘಟಿತವಾಗಿ ಕಾರ್ಯ ನಿರ್ವಹಿಸಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಸಂಬಂಧಪಟ್ಟ ಖಾತೆಗಳ ಐಪಿ ವಿಳಾಸಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಖಾತೆಗಳನ್ನು ಬಳಸಿದವರನ್ನು ಗುರುತಿಸುವ ಪ್ರಯತ್ನವೂ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಡಿಯೋಗಳ ಮೂಲ, ಅವುಗಳ ಸತ್ಯಾಸತ್ಯತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅವುಗಳನ್ನು ಹರಡಿದವರ ಪಾತ್ರದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಇದೇ ವೇಳೆ, ಸಿದ್ದರಾಮಯ್ಯ ಅವರು ಹನಿಟ್ರ್ಯಾಪ್ ಹಾಗೂ ನಕಲಿ ಸ್ಟಿಂಗ್ ಆಪರೇಷನ್ ವಿಡಿಯೋಗಳ ಹರಡುವಿಕೆಯನ್ನು ತಡೆಯಲು ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರಿನ ಸಿಸಿಎಚ್ ನ್ಯಾಯಾಲಯ ವಿವಾದಿತ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದೆ ಎನ್ನಲಾದ ಎರಡು ಆಕ್ಷೇಪಾರ್ಹ ವಿಡಿಯೋಗಳು, ಅವುಗಳ ಲಿಂಕ್ಗಳು, ಸ್ಕ್ರೀನ್ಶಾಟ್ಗಳು ಅಥವಾ ವರದಿಗಳನ್ನು ಯಾವುದೇ ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೆ, ಈಗಾಗಲೇ ಅಪ್ಲೋಡ್ ಆಗಿರುವ ವಿಡಿಯೋಗಳ ಲಿಂಕ್ಗಳನ್ನು ಬ್ಲಾಕ್ ಮಾಡಲು ಸೂಚಿಸಿದೆ.
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವಿಡಿಯೋಗಳು ಸಂಪೂರ್ಣ ನಕಲಿ ಹಾಗೂ ಆಧಾರರಹಿತವಾಗಿದ್ದು, ತಮ್ಮ ಚಾರಿತ್ರ್ಯ ಹನನ ಮತ್ತು ರಾಜಕೀಯ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರವಾಗಿದೆ ಎಂದು ಅವರು ಕೋರ್ಟ್ಗೆ ತಿಳಿಸಿದ್ದಾರೆ. ಸುಮಾರು 15 ವರ್ಷಗಳ ಹಳೆಯದಾದ, ಯಾವುದೇ ಸತ್ಯಾಸತ್ಯತೆ ಇಲ್ಲದ ಕಾಲ್ಪನಿಕ ಘಟನೆಯನ್ನು ಮುಂದಿಟ್ಟುಕೊಂಡು ಈ ವಿಡಿಯೋ ಸೃಷ್ಟಿಸಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm