Davanagere Accident: ದಾವಣಗೆರೆ ; ಸಿಎನ್‌ಜಿ ಲಾರಿಗೆ ಕಾರು ಭೀಕರ ಡಿಕ್ಕಿ, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಲಿ! ಲಾರಿಯ ಕ್ಯಾಮೆರಾದಲ್ಲಿ ಸೆರೆಯಾಯ್ತು ಅಪಘಾತದ ಭಯಾನಕ ದೃಶ್ಯ !

16-10-26 09:49 pm       HK News Staffer   ಕರ್ನಾಟಕ

ಸಿಎನ್​ಜಿ ತುಂಬಿದ್ದ ಲಾರಿಗೆ ಹಿಂದಿನಿಂದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ನಡೆದಿದೆ.

ದಾವಣಗೆರೆ, ಅ 16: ಸಿಎನ್​ಜಿ ತುಂಬಿದ್ದ ಲಾರಿಗೆ ಹಿಂದಿನಿಂದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ನಡೆದಿದೆ.

ಸುಜನ್ (16) ಸ್ಥಳದಲ್ಲೇ ಮೃತಪಟ್ಟರೆ, ರಾಮ್ ತೇಜ್ ರೆಡ್ಡಿ (17) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ವಿದ್ಯಾರ್ಥಿ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ವಿದ್ಯಾರ್ಥಿ ಆದಿತ್ಯ (16) ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತ ಹಾಗೂ ಗಾಯಗೊಂಡ ವಿದ್ಯಾರ್ಥಿಗಳು ದಾವಣಗೆರೆಯ ಶಕ್ತಿನಗರ ಹಾಗೂ ಜೆ.ಹೆಚ್.ಪಟೇಲ್ ಬಡಾವಣೆಯ ನಿವಾಸಿಗಳೆಂದು ತಿಳಿದುಬಂದಿದೆ. ಕಾರು ಬೆಂಗಳೂರು ಕಡೆಯಿಂದ ದಾವಣಗೆರೆಯತ್ತ ಬರುವಾಗ ಈ ಅಪಘಾತ ನಡೆದಿದೆ. ಅಜಾಗರೂಕ ಕಾರು ಚಾಲನೆಯಿಂದ ಈ ಭೀಕರ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ದಾವಣಗೆರೆ ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕನ ಶವವನ್ನು ಹೊರ ತೆಗೆಯಲು ಹೆದ್ದಾರಿ ಗಸ್ತು ಸಿಬ್ವಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಅಪಘಾತದ ದೃಶ್ಯವು ಲಾರಿಯಲ್ಲಿನ ಕ್ಯಾಮರಾದಲ್ಲಿ ಸೆರೆಯಾಗಿದೆ.