ಬ್ರೇಕಿಂಗ್ ನ್ಯೂಸ್
13-01-21 10:52 am Source: FilimiBeat ಕರ್ನಾಟಕ
ಬೆಂಗಳೂರು, ಜ.13: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗಿರುವ ಬಹುನಿರೀಕ್ಷೆಯ ಕೆಜಿಎಫ್-2 ಟೀಸರ್ ನಂ.1 ಟ್ರೆಂಡಿಂಗ್ ನಲ್ಲಿದೆ. ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡು ಟೀಸರ್ ದಾಖಲೆ ನಿರ್ಮಿಸಿದೆ.
ಇಡೀ ಭಾರತೀಯ ಸಿನಿಮಾರಂಗವೇ ಕಾತರದಿಂದ ಕಾಯುತ್ತಿರುವ ಚಿತ್ರದ ಟೀಸರ್ ಗೆ ಈ ಪರಿ ಪ್ರತಿಕ್ರಿಯೆ ಸಿಕ್ಕಿರುವುದು ನೋಡಿ ಭಾರತೀಯ ಸಿನಿಮಾರಂಗ ದಂಗ್ ಆಗಿದೆ. ಕನ್ನಡ ಚಿತ್ರದ ಟೀಸರ್ ವೊಂದು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರೀತಿಗೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ.
ಟೀಸರ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟೀಸರ್ ಸಂಬಂಧ ಯಶ್ ಗೆ ನೋಟಿಸ್ ನೀಡಿದೆ. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ 'ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ' ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.
ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. ಅಂದಹಾಗೆ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಈ ದೃಶ್ಯಕ್ಕೆ ಈಗ ಆಕ್ಷೇಪ ವ್ಯಕ್ತವಾಗಿದೆ.
Health department officials issue notice to KGF 2 Actor Yash for not explicating No Smoking Heading while using a gun to smoke in the movie teaser.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm