ಬ್ರೇಕಿಂಗ್ ನ್ಯೂಸ್
13-01-21 05:13 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಜ.13: ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ಬೆಂಗಳೂರಿನ ನಿವಾಸಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಸರಕಾರದ ಅಭಿಪ್ರಾಯ ಕೇಳಿ ನೋಟಿಸ್ ಜಾರಿ ಮಾಡಿದೆ.
ನ್ಯಾಯಾಧೀಶರಾದ ಅಭಯ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗ್ದುಮ್ ಅವರಿದ್ದ ದ್ವಿಸದಸ್ಯ ಪೀಠ, ಬೆಂಗಳೂರಿನ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಂವಿಧಾನದಲ್ಲಿ ಉಲ್ಲೇಖಿತ ಮೂಲಭೂತ ಹಕ್ಕು ಆಗಿರುವ ಆರ್ಟಿಕಲ್ 13, 19(1) ಜಿ ಮತ್ತು 21 ಕಲಂ ಅನ್ನು ಉಲ್ಲಂಘನೆ ಮಾಡುತ್ತದೆ ಎಂದು ಮೊಹ್ಮದ್ ಜಮೀಲ್ ವಾದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ನಾಟಕ ಸರಕಾರದ ಪರವಾಗಿ ಕೋರ್ಟಿನ ಪ್ರಶ್ನೆಗೆ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಈ ಬಗ್ಗೆ ಉತ್ತರ ನೀಡಲು ಸಮಯ ಬೇಕಾಗುತ್ತದೆ. ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಸರಕಾರ ಯಾವೆಲ್ಲ ಕಾನೂನನ್ನು ಪರಿಗಣಿಸಿದೆ ಎಂಬ ಬಗ್ಗೆ ಪರಿಶೀಲಿಸಿ ಉತ್ತರ ನೀಡುತ್ತೇವೆ ಎಂದಿದ್ದಾರೆ.
ಜಮೀಲ್ ಸಲ್ಲಿಸಿದ ಅರ್ಜಿಯ ಜೊತೆಗೆ ಮುಂಬೈ ಹೈಕೋರ್ಟ್ ನೀಡಿದ ತೀರ್ಪಿನ ಅಂಶವನ್ನೂ ಉಲ್ಲೇಖ ಮಾಡಿದ್ದಾರೆ. ಶೇಖ್ ಝಹೀದ್ ಮುಕ್ತರ್ ಮತ್ತು ಮಹಾರಾಷ್ಟ್ರ ಸರಕಾರದ ನಡುವಿನ ಪ್ರಕರಣದಲ್ಲಿ ಕೋರ್ಟ್, ಜನರ ಆಹಾರದ ಹಕ್ಕಿನ ವಿಚಾರದಲ್ಲಿ ಸರಕಾರ ನಿರ್ದೇಶನ ನೀಡುವುದು ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದಿತ್ತು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಆಹಾರದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಮೊಹಮ್ಮದ್ ಜಮೀಲ್ ವಾದಿಸಿದ್ದು, ಇದರ ಮುಂದಿನ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿದೆ.
The Karnataka High Court on Tuesday issued notice on the recent ordinance brought by the Karnataka Government to prevent cattle slaughter.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am