ಬ್ರೇಕಿಂಗ್ ನ್ಯೂಸ್
22-01-21 09:10 am Santosh ಕರ್ನಾಟಕ
ಶಿವಮೊಗ್ಗ, ಜನವರಿ 22: ಇಲ್ಲಿನ ಹುಣಸವಾಡಿಯ ಅಬ್ಬಲಗೇರಿ ಎಂಬಲ್ಲಿ ರೈಲ್ವೆ ಇಲಾಖೆಗೆ ಸೇರಿದ ಕ್ರಷರ್‌ನಲ್ಲಿ ಭಾರಿ ಸ್ಪೋಟ ಸಂಭವಿಸಿದ್ದು ಹತ್ತಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ಲೋಡ್ ಗಟ್ಟಲೆ ಡೈನಾಮೈಟ್ ಸಾಗಿಸುತ್ತಿದ್ದ ವೇಳೆ ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ. ಸ್ಫೋಟಗೊಂಡ ಲಾರಿಯಲ್ಲಿ ಎಷ್ಟು ಮಂದಿ ಇದ್ದರು, ಕ್ರಷರ್ ಬಳಿ ಎಷ್ಟು ಮಂದಿ ಇದ್ದರು ಎಂಬ ಸರಿಯಾದ ಮಾಹಿತಿ ಯಾರಲ್ಲೂ ಇಲ್ಲ. ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಕಿಮೀ ದೂರಕ್ಕೆ ಎಸೆಯಲ್ಪಟ್ಟಿದೆ. ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ.


ಸ್ಫೋಟದ ಸದ್ದು ಇಡೀ ಶಿವಮೊಗ್ಗ , ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೇಳಿಬಂದಿದ್ದು ಭೂಕಂಪ ಆಗಿದೆ ಎಂದು ಜನ ಹೆದರಿ ಮನೆಯಿಂದ ಹೊರಗೆ ಓಡಿಬಂದಿದ್ದರು. ತೀರ್ಥಹಳ್ಳಿ, ಕೊಪ್ಪ , ಕಡೂರು ಹೀಗೆ ಮಲೆನಾಡಿನಾದ್ಯಂತ ನಿನ್ನೆ ರಾತ್ರಿ ಈ ಭಾರೀ ಸದ್ದು ಆತಂಕಕ್ಕೆ ಕಾರಣವಾಗಿತ್ತು.
ರೈಲ್ವೆ ಕ್ರಷರ್‌ನಲ್ಲಿ ಕಲ್ಲು ಗಣಿಗಾರಿಕೆಗೆಂದು ಲಾರಿಯಲ್ಲಿ ತರಲಾಗಿದ್ದ ಡೈನಮೈಟ್ ಸ್ಪೋಟಕ ಅನ್ ಲೋಡಿಂಗ್ ವೇಳೆ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಮೃತದೇಹಗಳು ಛಿದ್ರವಾಗಿ ಬಿದ್ದಿದ್ದು ಗುರುತು ಸಿಗದಂತಾಗಿದೆ.
ಸ್ಪೋಟ ನಡೆದ ಸ್ಥಳಕ್ಕೆ ರಾತ್ರಿಯೇ ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸ್ಫೋಟದ ಸಾಧ್ಯತೆ ಇರುವ ಡೈನಮೈಟ್ ಪತ್ತೆಗಾಗಿ ಮಂಗಳೂರು ಮತ್ತು ಬೆಂಗಳೂರಿನಿಂದ ಎರಡು ಬಾಂಬ್ ಸ್ಕ್ವಾಡ್ ಆಗಮಿಸಿದೆ. ಸದ್ಯ ಘಟನಾ ಸ್ಥಳದ ಸುತ್ತ ಬ್ಯಾರಿಕೇಡ್ ಹಾಕಿ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ. ಸ್ಥಳಕ್ಕೆ ಯಾರನ್ನೂ ಒಳ ಬರದಂತೆ ನಿರ್ಬಂಧ ಹೇರಿದ್ದು ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
Eight people were killed in an explosion at a stone mining quarry in at Hunasondi near village Abbalagere of Shivamogga district.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm