ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am