ಬ್ರೇಕಿಂಗ್ ನ್ಯೂಸ್
14-02-21 05:29 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.14: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲಾ ಹಿಂದು, ನಾವೆಲ್ಲ ಒಂದು ಎಂದು ಹಿಂದು ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ, ಯಾರಾದರೂ ಉತ್ತರಿಸುವಿರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಪ್ರೇರಿತ ಜಾತಿ ಸಮಾವೇಶಗಳ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ಮೀಸಲಾತಿ ಹೆಚ್ಚಳಕ್ಕಾಗಿ ಆಗ್ರಹಿಸುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರಕಾರ ಮೀಸಲಾತಿ ಪರವಾಗಿದ್ದರೆ, ಈ ಮೊದಲು ಕಾಂಗ್ರೆಸ್ ಸರಕಾರ ಇದ್ದಾಗ ನಡೆಸಿದ್ದ ಜಾತಿ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಟಾನಗೊಳಿಸಬೇಕು ಎಂದಿದ್ದಾರೆ.
ಈಗಿನ ಮೀಸಲಾತಿ ಬದಲಾವಣೆ, ಹೆಚ್ಚಳದ ಹೋರಾಟದ ಬೇಡಿಕೆಗೆ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇ.73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರಕಾರ ಮಾಡಿರುವ ಕಾನೂನು ಪರಿಹಾರ. ಅದರ ಅನುಷ್ಠಾನ ಕೇಂದ್ರ ಸರಕಾರದ ಕೈಯಲ್ಲಿದೆ ? ರಾಜ್ಯದಲ್ಲಿ ಮೀಸಲಾತಿಗಾಗಿ ರಾಜ್ಯ ಸರಕಾರದವರೇ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಯಾರ ವಿರುದ್ಧ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇರುವಾಗ ಹೋರಾಟದ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.
ಮೀಸಲಾತಿಯನ್ನು ನೇರವಾಗಿ ವಿರೋಧಿಸಲಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಅಮಾಯಕ ಜನತೆ ಈ ಮೋಸಕ್ಕೆ ಬಲಿಯಾಗಬಾರದು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡವರು ಯಾರು..? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳ ಮೀಸಲಾತಿಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದ ಬಿಜೆಪಿಯವರು ಈಗ ಮೀಸಲಿಗಾಗಿ ಹೋರಾಟ ನಡೆಸುತ್ತಿರುವುದು ಪ್ರಾಮಾಣಿಕ ಜ್ಞಾನೋದಯವೇ ಅಥವಾ ಮೀಸಲು ಹೋರಾಟವನ್ನು ದಿಕ್ಕು ತಪ್ಪಿಸುವ ಯತ್ನವೇ ಎಂದು ಕರ್ನಾಟಕದ ಬಿಜೆಪಿಯನ್ನು ಗುರಿಯಾಗಿರಿಸಿ ಕಟಕಿಯಾಡಿದ್ದಾರೆ.
ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ @BJP4India ಕೈಯಲ್ಲಿದೆ. 6/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
'ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ @narendramodi, ಇಲ್ಲಿನ ಮುಖ್ಯಮಂತ್ರಿ @BSYBJP. 5/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು. 4/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ? 3/7#ಸಾಮಾಜಿಕನ್ಯಾಯ
— Siddaramaiah (@siddaramaiah) February 14, 2021
Ex cm Siddaramayya slams BJP leaders and cm Yeddyurappa on caste reservation issues in tweets
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm