ಬ್ರೇಕಿಂಗ್ ನ್ಯೂಸ್
16-02-21 12:57 pm Bangalore Correspondent ಕರ್ನಾಟಕ
ಬೆಂಗಳೂರು, ಫೆ. 16: ಭಾರತದಾದ್ಯಂತ ನಿನ್ನೆ ಮಧ್ಯರಾತ್ರಿಯಿಂದಲೇ ಎಲ್ಲ ವಾಹನಗಳಿಗೂ ಇಂದಿನಿಂದ ನೂರಕ್ಕೆ ನೂರರಷ್ಟು FASTag ಬಳಕೆ ಕಡ್ಡಾಯವಾಗಿದೆ.
ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ಇಂದಿನಿಂದ ದುಪ್ಪಟ್ಟು ಹಣವನ್ನು ಪಾವತಿಸಬೇಕಾಗುತ್ತದೆ. ಇಂದಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ. ನಿನ್ನೆ ರಾತ್ರಿಯಿಂದಲೇ ದೇಶಾದ್ಯಂತ ಹೊಸ ನಿಯಮ ಜಾರಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡೋಕೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದೆ.
ಒಂದುವೇಳೆ ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಹಣ ಕಟ್ಟಬೇಕು. ಮೊದಲು ಫಾಸ್ಟ್‌ಟ್ಯಾಗ್ ಇಲ್ಲದಿದ್ದರೂ ಟೋಲ್ ಗೇಟ್ನಲ್ಲಿ ಹೋಗುವ ಮತ್ತು ಬರುವ ಟೋಕನ್ ನೀಡಲಾಗುತ್ತಿತ್ತು. ಆದರೆ, ಇದೀಗ ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಕೇವಲ ಒನ್ ಸೈಡ್ ಟೋಕನ್ಗೆ ಮಾತ್ರ ಅವಕಾಶ ನೀಡಲಾಗುವುದು. ಆದರೆ, ಒನ್ ಸೈಡ್ಗೂ ದುಪ್ಪಟ್ಟು ಹಣ ನೀಡಿ ಸಂಚರಿಸಬೇಕಾಗುತ್ತದೆ.
ಜನವರಿ 1ರಿಂದಲೇ ಟೋಲ್ಗಳಲ್ಲಿ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲಾಗಿತ್ತು. ಆದರೆ, ಆದರೆ, ಈ ಬಗ್ಗೆ ಹೆಚ್ಚು ಜನರಿಗೆ ಮಾಹಿತಿ ಇಲ್ಲದ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ನಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುವ ಡೆಡ್ ಲೈನ್ ಅನ್ನು ಫೆಬ್ರವರಿ 15ರವರೆಗೆ ವಿಸ್ತರಿಸಲಾಗಿತ್ತು. ಟೋಲ್ ಪ್ಲಾಜಾಗಳ ಶೇ.75ರಷ್ಟು ಲೇನ್‌ಗಳಲ್ಲಿ ಜನವರಿ 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿತ್ತು. ಉಳಿದ ಶೇ.25ರಷ್ಟು ಲೇನ್‌ಗಳನ್ನು ಹೈಬ್ರಿಡ್ ಲೇನ್‌ಗಳೆಂದು ಪರಿಗಣಿಸಲಾಗಿತ್ತು. ಈ ಲೇನ್‌ಗಳಲ್ಲಿ ಫಾಸ್ಟ್ ಟ್ಯಾಗ್ ಇಲ್ಲದೆಯೂ ನಗದು ಸೇರಿದಂತೆ ಇತರೆ ಸಾಮಾನ್ಯ ಪದ್ಧತಿಯಲ್ಲೂ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿತ್ತು. ನಿನ್ನೆ ರಾತ್ರಿಯಿಂದ ಆ ಆಯ್ಕೆಯನ್ನು ರದ್ದುಗೊಳಿಸಲಾಗಿದೆ.
ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಅಳವಡಿಸದ ವಾಹನ ಬಳಕೆದಾರರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಮೊತ್ತಕ್ಕಿಂತ ಎರಡು ಪಟ್ಟು ವಿಧಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿನ ಎಲ್ಲಾ ಪಥಗಳನ್ನು 2021 ನಿನ್ನೆ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ 'ಟೋಲ್ ಪ್ಲಾಜಾದ ಫಾಸ್ಟ್ಯಾಗ್ ಲೇನ್' ಎಂದು ಘೋಷಿಸಲಾಗಿದೆ. ಫಾಸ್ಟ್‌ಟ್ಯಾಗ್ ಅಳವಡಿಸದ ವಾಹನಗಳು ಫಾಸ್ಟ್‌ಟ್ಯಾಗ್ ಲೇನ್‌ಗೆ ಪ್ರವೇಶಿಸುವುದರಿಂದ ಆ ಎಂ ಮತ್ತು ಎನ್ ವರ್ಗದ ವಾಹನಗಳಿಗೆ ಅನ್ವಯವಾಗುವ ಶುಲ್ಕದ ಎರಡು ಪಟ್ಟು ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಖಾಸಗಿಯಾಗಿರಲಿ ಅಥವಾ ವಾಣಿಜ್ಯ ಬಳಕೆಗೆ ಆಗಿರಲಿ ಎಲ್ಲ ನಾಲ್ಕು ಚಕ್ರದ ವಾಹನಗಳಿಗೂ ಫಾಸ್ಟ್ ಟ್ಯಾಗ್ ಅಳವಡಿಸುವುದು ಕಡ್ಡಾಯವಾಗಿದೆ. ಆರಂಭದಲ್ಲಿ ಡಿಸೆಂಬರ್ 15ರೊಳಗೆ ಫಾಸ್ಟ್ ಟ್ಯಾಗ್ ಅಳವಡಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ನಂತರ ಅದನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿತ್ತು. ಕೊನೆಗೆ ಅಂತಿಮವಾಗಿ ಜನವರಿ 1ಕ್ಕೆ ಮುಂದೂಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇಂದಿನಿಂದ ಕಟ್ಟುನಿಟ್ಟಾಗಿ ಫಾಸ್ಟ್‌ಟ್ಯಾಗ್ ವ್ಯವಸ್ಥೆ ಜಾರಿಗೆ ಬರಲಿದೆ.
ಫಾಸ್ಟ್ಯಾಗ್ ಖರೀದಿಸಲು ನಿಮ್ಮ ವಾಹನದ ಆರ್ಸಿ ದಾಖಲೆಗಳನ್ನು ನೀಡಬೇಕಾಗುತ್ತದೆ. ವಾಹನದ ವಿಂಡ್ ಸ್ಕ್ರೀನ್ ಮೇಲೆ ಫಾಸ್ಟ್ ಟ್ಯಾಗ್ ಅಂಟಿಸಲಾಗುತ್ತದೆ. ಫಾಸ್ಟ್ಯಾಗ್ ಖಾತೆಗೆ ನಿಮ್ಮ ಬ್ಯಾಂಕ್ ಅಕೌಂಟ್ ಅಥವಾ UPI ಐಡಿಯನ್ನು ಲಿಂಕ್ ಮಾಡಬೇಕಾಗುತ್ತದೆ. ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡರೆ ಟೋಲ್ ಪ್ಲಾಜಾ ಬಳಿ ವಾಹನಗಳನ್ನು ನಿಲ್ಲಿಸಬೇಕೆಂದಿಲ್ಲ. ಸ್ವಯಂಚಾಲಿತವಾಗಿ ಶುಲ್ಕ ಫಾಸ್ಟ್ ಟ್ಯಾಗ್ ಮೂಲಕ ಕಡಿತವಾಗುತ್ತದೆ. ಫಾಸ್ಟ್ ಟ್ಯಾಗ್ ಅನ್ನು ವಾಹನ ಮಾಲೀಕರ ಬ್ಯಾಂಕ್ ಖಾತೆಗೆ ಅಥವಾ ಪ್ರಿಪೇಡ್ ವಾಲೆಟ್ ಗೆ ಸಂಪರ್ಕಿಸಲಾಗುತ್ತದೆ. ಫಾಸ್ಟ್ ಟ್ಯಾಗ್ ಆರ್ಎಫ್ಐಡಿ ತಂತ್ರಜ್ಞಾನ ಮೂಲಕ ಕಾರ್ಯ ನಿರ್ವಹಿಸುತ್ತದೆ. ಫಾಸ್ಟ್ ಟ್ಯಾಗ್ ನ್ನು ಪ್ರಸ್ತುತ 23 ಬ್ಯಾಂಕುಗಳಿಗೆ ಜೋಡಿಸಲಾಗಿದೆ.
ಪೇಟಿಎಂ, HDFC ಬ್ಯಾಂಕ್, ICICI ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೋಟಕ್ ಮಹೀಂದ್ರ ಬ್ಯಾಂಕ್ ಇತ್ಯಾದಿಗಳ ಮೂಲಕ ಫಾಸ್ಟ್‌ಟ್ಯಾಗ್ ಖರೀದಿಸಬಹುದು.
The FASTag service to digitally pay the toll tax on national highways is now live across the country. The vehicles trying to cross the toll plazas without it will now have to pay double fee as hybrid lanes have been discontinued.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm