ಬ್ರೇಕಿಂಗ್ ನ್ಯೂಸ್
17-02-21 10:21 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.17: ಮೀಸಲಾತಿ ಹೋರಾಟದಲ್ಲಿ ರಾಜ್ಯದ ಸಚಿವರು ಭಾಗಿಯಾಗಿದ್ದು ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಸಿಎಂ ಯಡಿಯೂರಪ್ಪ ಅವರಿಗೆ ಪೀಕಲಾಟ ತಂದಿಟ್ಟಿದೆ. ಮೀಸಲಾತಿ ಹೋರಾಟದಲ್ಲಿ ಬಿಜೆಪಿ ಸಚಿವರು, ಶಾಸಕರು ಪಾಲ್ಗೊಂಡಿದ್ದ ಬಗ್ಗೆ ಮತ್ತು ಸದ್ಯದ ಸ್ಥಿತಿಗತಿ ಬಗ್ಗೆ ಬಿಜೆಪಿ ಹೈಕಮಾಂಡ್ ರಾಜ್ಯದಿಂದ ಪ್ರತ್ಯೇಕ ವರದಿ ಕೇಳಿದೆ.
ಕೆಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದು ಇದರಲ್ಲಿ ಈಶ್ವರಪ್ಪ ಸೇರಿದಂತೆ ಕೆಲವು ಸಚಿವರು ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ದರು. ಕೇಂದ್ರ ಬಿಜೆಪಿ ನಾಯಕರ ಸೂಚನೆ ಹೊರತಾಗಿಯೂ ಈ ನಡೆ ತೋರಿದ್ದಕ್ಕೆ ಹೈಕಮಾಂಡ್ ನಾಯಕರು ಗರಂ ಆಗಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಹಲವು ಸಚಿವರು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಾರೆ, ಸಚಿವರಾದ ಬಿ. ಶ್ರೀರಾಮುಲು, ಕೆ.ಎಸ್ ಈಶ್ವರಪ್ಪ ಮತ್ತು ಹೋರಾಟದಲ್ಲಿ ಪಾಲ್ಗೊಂಡಿದ್ದ ಶಾಸಕರ ಬಗ್ಗೆ ಹೈಕಮಾಂಡ್ ಮಾಹಿತಿ ಕೇಳಿದೆ. ಮೀಸಲಾತಿ ಹೋರಾಟದಲ್ಲಿ ಭಾಗವಹಿಸದಂತೆ ತಮ್ಮ ಸಂಪುಟ ಸದಸ್ಯರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದರೂ, ಕೆಲವರು ಭಾಗಿಯಾಗಿದ್ದರು.
ಮೀಸಲಾತಿ ಹೋರಾಟದ ಸ್ಥಾನಮಾನ, ಜಾತಿವಾರು ಹೋರಾಟದ ಬೇಡಿಕೆಗಳ ಬಗ್ಗೆ ಮುಂದಿನ ವಾರದೊಳಗೆ ವಿವರಣೆ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚಿಸಿದ್ದಾರೆ ಎನ್ನಲಾಗಿದೆ.
ಮೀಸಲಾತಿಗೆ ಸಂಬಂಧಿಸಿದ ಹೋರಾಟದಲ್ಲಿ ಪಕ್ಷದ ಯಾವುದೇ ಮುಖಂಡರು ಕಾಣಿಸದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಇತ್ತೀಚೆಗೆ ನಡೆದ ಕೊರ್ ಕಮಿಟಿ ಸಭೆಯಲ್ಲಿ ಸೂಚಿಸಿದ್ದರು ಎನ್ನಲಾಗುತ್ತಿದ್ದು ಇದನ್ನು ಪರಿಗಣಿಸದೆ ಈಗ ರಾಜ್ಯದ ನಾಯಕರು ಹೋರಾಟದಲ್ಲಿ ಕಾಣಿಸಿಕೊಂಡಿದ್ದು ಇರಿಸು ಮುರಿಸಿಗೆ ಕಾರಣವಾಗಿದೆ.
ಬಿಜೆಪಿ ನಾಯಕರೊಬ್ಬರಿಂದ ಆರಂಭಗೊಂಡ ಹೋರಾಟ ಈಗ ಚಳವಳಿ ರೂಪ ಪಡೆದಿದೆ. ಆದರೆ ಸಚಿವರು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದು ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಕೇಂದ್ರ ಸಚಿವರುಗಳಿಗೂ ಇದು ಅಸಮಾಧಾನ ಉಂಟು ಮಾಡಿತ್ತು. ಈ ಸಂಬಂಧ ಸಿಎಂ ಯಡಿಯೂರಪ್ಪ ಮತ್ತು ಹೋರಾಟದಲ್ಲಿ ಭಾಗವಹಿಸಿದ್ದ ಸಚಿವರಿಗೆ ಕೇಂದ್ರ ನಾಯಕರು ಪ್ರಬಲ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Karnataka chief minister BS Yediyurappa and Bjp president Naleen Kumar Kateel are now found themself in an uncomfortable spot after government does not accept demands of increasing reservation opportunities.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm