ಬ್ರೇಕಿಂಗ್ ನ್ಯೂಸ್
25-02-21 01:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.25 : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್‍ಗೆ ಬಿಬಿಎಂಪಿ ಬೀಗ ಜಡಿದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್‍ಗೆ ಬೀಗ ಹಾಕಿದ್ದೇವೆ ಎಂದರು.

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್‍ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am