ಬ್ರೇಕಿಂಗ್ ನ್ಯೂಸ್
03-03-21 08:53 pm Headline Karnataka News Network ಕರ್ನಾಟಕ
ಬೆಳಗಾವಿ, ಮಾ 3: ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.
ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್ಗಳಲ್ಲಿ ಬಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್ನ ಹಿಂಬದಿಯ ಹಾಗೂ ಮುಂಬದಿಯ ಗಾಜುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.
ಕೂಡಲೇ ಬಸ್ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಬಸ್ಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಕಳುಹಿಸಲಾಗಿದೆ. ಇತ್ತ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೈಲಹೊಂಗಲ, ಗೋಕಾಕ್, ಬೆಳಗಾವಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ವಿವಿಧ ಮಾರ್ಗಗಳಿಗೆ ಸಂಚರಿಸುತ್ತಿದ್ದ ಬಸ್ಗಳನ್ನು ಗೋಕಾಕ್ ಡಿಪೋದಲ್ಲಿ ನಿಲ್ಲಿಸಲಾಗಿತ್ತು. ಬಸ್ಗಳ ಮೇಲೆ ಕಲ್ಲು ತೂರಾಟ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Eight government buses stone pelted in Belgaum after minister Ramesh Jarkiholis resignation due to the sex scandal.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm