ಬ್ರೇಕಿಂಗ್ ನ್ಯೂಸ್
06-03-21 12:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ, ಎನ್ಎಸ್ಎಲ್ ಎಂದೇ ಖ್ಯಾತರಾಗಿದ್ದ, ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅವರಿಗೆ 85 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬನಶಂಕರಿಯ ನಿವಾಸದಲ್ಲಿ ಮುಂಜಾನೆ 4.45 ಕ್ಕೆ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದ ಎನ್ಎಸ್ಎಲ್ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಸಾಹಿತ್ಯದ ಬಹುತೇಕ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿದ್ದ ಇವರು 1974 ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಲ್ಲದೇ ಎಲಿಯಟ್, ಷೇಕ್ಸ್‌ಪಿಯರ್ ಕಾವ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು.''
"ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
— CM of Karnataka (@CMofKarnataka) March 6, 2021
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
Dr N. S. Lakshminarayan Bhatta passes away at 85. born 1926 is a Kannada poet from Shivamogga district. He was awarded the Karnataka Sahitya Akademi in 1974.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm