ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am