ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am