ಬ್ರೇಕಿಂಗ್ ನ್ಯೂಸ್
31-03-21 06:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.31: ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವೊಮ್ಮೆ ಅಕಾಲಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರಿನ ಕೆಲವಡೆ ಮಳೆಯಾಗಿದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ.
ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಕೆಲವೆಡೆ ಬೆಳಗ್ಗೆ ಹೊತ್ತು ಮೋಡ ಕವಿದ ವಾತಾವರಣ ಇರಲಿದೆ ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್ 1ರ ತನಕ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲಿ ಹೆಚ್ಚು ಮಳೆ:
ಕಳೆದ 24 ಗಂಟೆಗಳ ಮಳೆ ನಕ್ಷೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಜತ್ತೂರು ಎಂಬಲ್ಲಿ ಅತ್ಯಧಿಕ 49 ಮಿ. ಮೀ ಮಳೆಯಾಗಿದೆ.
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm