ಬ್ರೇಕಿಂಗ್ ನ್ಯೂಸ್
22-08-20 02:43 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 22: ತೀವ್ರ ಸಂಚಲನ ಸೃಷ್ಟಿಸಿರುವ ನಂಜನಗೂಡು ಟಿಎಚ್‍ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ದಂಬಂಧಿಸಿದಂತೆ ಜಿ.ಪಂ. ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಇಒ ಪ್ರಶಾಂತ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಡಾ.ನಾಗೇಂದ್ರ ತಂದೆ ರಾಮಕೃಷ್ಣ ಅವರು ಮಗನ ಆತ್ಮಹತ್ಯೆ ಕುರಿತು ದೂರು ದಾಖಲಿಸಿದ್ದರು.
ದೂರಿನಲ್ಲಿ ತಮ್ಮ ಮಗನ ಮೇಲೆ ಒತ್ತಡ ಇರುವುದರ ಬಗ್ಗೆ ತಂದೆ ಆರೋಪಿಸಿದ್ದಾರೆ. ಡಾ.ನಾಗೇಂದ್ರ ಅವರಿಗೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೋಳ್ಳುತ್ತೇವೆ ಎಂದು ಅಧಿಕಾರಿ ಹೆದರಿಸುತ್ತಿದ್ದರು ಎಂದು ತಂದೆ ಆರೋಪಿಸಿದ್ದಾರೆ. ನಾಗೇಂದ್ರ ತಂದೆ ರಾಮಕೃಷ್ಣ ಅವರ ದೂರಿನ ಅನ್ವಯ ಸಿಇಓ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಡಾ.ನಾಗೇಂದ್ರ ಕುಟುಂಬಕ್ಕೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ನಾಗೇಂದ್ರ ಪತ್ನಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕಿ ಹುದ್ದೆ ನೀಡಲಾಗುವುದು. ತನಿಖೆ ನಡೆಸಿ ಅಧಿಕಾರಿ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ಎಲ್ಲರಿಗೂ ಕೆಲಸದ ಒತ್ತಡವಿರುತ್ತದೆ. ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm