ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am