ಬ್ರೇಕಿಂಗ್ ನ್ಯೂಸ್
05-04-21 06:20 pm Headline Karnataka News Network ಕರ್ನಾಟಕ
ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು ಏಪ್ರಿಲ್ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.
ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.
ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am