ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.

ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am