ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.
ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm