ಬ್ರೇಕಿಂಗ್ ನ್ಯೂಸ್
15-04-21 02:33 pm Headline Karnataka News Network ಕರ್ನಾಟಕ
ಶಿವಮೊಗ್ಗ,ಎ.15 : ಚುನಾವಣೆ ಅಂದರೆ ಅಲ್ಲಿ ಬಿಜೆಪಿ ಪಕ್ಷ ಗೆಲುವುದು ನಿಶ್ಚಿತ. ಈ ಹಿಂದೆ ಲೋಕಸಭೆ ಚುನಾವಣೆ ಬಳಿಕ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಈಗ ನಡೆಯಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಮ್ಮ ಪಕ್ಷ ಗೆಲ್ಲಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾತಾನಾಡಿದ ಅವರು, ಮುಂದಿನ ಸಿಎಂ ನಾನೇ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸಿ ಸೋತು, ಸಿಎಂ ಸ್ಥಾನವನ್ನು ಕಳೆದುಕೊಂಡರು. ಅವರಿಗೆ ಮಾನ, ಮಾರ್ಯಾದೆನೇ ಇಲ್ಲ. ಸೋತಿದ್ದೇವೆ ಎಂಬ ಜ್ಞಾನವಿಲ್ಲದೇ ಏನೇನೋ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕೋವಿಡ್ ಬಗ್ಗೆ ಸಭೆ ಕರೆದು ಏನೂ ಲಾಭವಿಲ್ಲ ಎನ್ನುವ ಡಿಕೆಶಿ ರಾಷ್ಟ್ರಪತಿ ಆಳ್ವಿಕೆ ಹೇರಿಬಿಡಿ. ವಿಧಾನಸಭೆಯನ್ನೇ ವಿಸರ್ಜಿಸಿ ಅಂತ ಹೇಳುತ್ತಾರೆ. ಅವರಿಗೆ ಅರ್ಜೆಂಟಾಗಿ ಅಧಿಕಾರಕ್ಕೆ ಬರಬೇಕು. ಈ ಯೋಚನೆ ಬಿಟ್ಟರೆ ಬೇರೇನಿಲ್ಲ ಎಂದರು.
ಜನರ ಹಿತದೃಷ್ಟಿಯಿಂದ ಸಲಹೆ- ಸೂಚನೆ ನೀಡಿ, ಸಹಕಾರ ಕೊಡೋದು ಬಿಟ್ಟು ಹೀಗೆ ಹೇಳಿದ್ದಾರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ಜನ್ಮದಲ್ಲೂ ಅಧಿಕಾರಕ್ಕೇರುವ ಅದೃಷ್ಟ ಬರಲ್ಲ ಎಮದು ವ್ಯಂಗ್ಯ ವಾಡಿದರು.

ಲಸಿಕೆ ಬೇರೆ ರಾಷ್ಟ್ರಕ್ಕೆ ರಫ್ತು ಬಗ್ಗೆ ಸಹ ಸಿದ್ದರಾಮಯ್ಯ, ಡಿಕೆಶಿ ಮಾತನಾಡಿದ್ದಾರೆ. ಭಾರತೀಯ ಸಂಸ್ಕೃತಿ ಹಂಚಿಕೊಂಡು ತಿನ್ನುವುದು. ಇದು ಇಟಲಿ ಸಂಸ್ಕೃತಿಯಲ್ಲ. ಇಟಲಿ ಸಂಸ್ಕೃತಿಯಂತೆಯೇ ಆ ಇಬ್ಬರು ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಸೋನಿಯಾ ಗಾಂಧಿ ಸಂತೃಪ್ತಿ ಪಡಿಸಲು ಸಿದ್ದರಾಮಯ್ಯ, ಡಿಕೆಶಿ ಮಾತನಾಡುತ್ತಿದ್ದಾರೆ. ನಮ್ಮ ರಾಷ್ಟ್ರದಲ್ಲಿ ಲಸಿಕೆ ಬಳಸಿಕೊಂಡೇ ಬೇರೆ ರಾಷ್ಟ್ರಕ್ಕೇ ಕಳುಹಿಸಲಾಗುತ್ತಿದೆ. ಈ ಭಾರತೀಯ ಸಂಸ್ಕೃತಿಗೆ ಒಗ್ಗುವಂತ ಅಭ್ಯಾಸವೇ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
Shivamogga Congress Siddaramaiah and DK Shivakumar will never become CM of Karnataka slammed Eshwarappa during a press meet.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am