ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am