ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್‌ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.
‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.
‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್‌ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm