ಬ್ರೇಕಿಂಗ್ ನ್ಯೂಸ್
02-05-21 11:11 am Headline Karnataka News Network ಕರ್ನಾಟಕ
ಬೀದರ್, ಮೇ 2: ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ಉಪ ಚುನಾವಣೆ ಮತ ಎಣಿಕೆ ಕಾರ್ಯ ಬೀದರ್ ನಗರದ ಬಿ.ವಿ ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ಆರಂಭವಾಗಿದ್ದು, ಡಜನ್ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.
ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಬೇಕಿದ್ದು, ಆದರೆ ಮತ ಎಣಿಕೆ ಕಾರ್ಯ ತಾಂತ್ರಿಕ ಕಾರಣದಿಂದ ಇನ್ನೂ ಆರಂಭವಾಗಿಲ್ಲ.
ಕೆಲವು ತಾಂತ್ರಿಕ ತೊಂದರೆಗಳ ಕಾರಣದಿಂದ ಮತ ಏಣಿಕೆ ಕಾರ್ಯ ತಡವಾಗಿದೆ ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಂಚೆ ಮತ ಏಣಿಕೆ ಕಾರ್ಯ ಆರಂಭವಾಗಿದೆ.
ಬಸವಕಲ್ಯಾಣ ಉಪ ಚುನಾವಣೆಯ ಮತ ಎಣಿಕೆಯ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ತಿಳಿಸಿದ್ದಾರೆ.
ಬೀದರ್ ನಗರದ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಮೇ.2ರಂದು ಬೆಳಗ್ಗೆ 8ರಿಂದ ಮೂರು ಕೌಂಟಿಂಗ್ ಕೇಂದ್ರದಲ್ಲಿ ಮತ ಎಣಿಕೆಯು ಆರಂಭವಾಗಲಿದೆ. ಪ್ರತಿ ಕೌಂಟಿಂಗ್ ಕೇಂದ್ರದಲ್ಲಿ ತಲಾ ನಾಲ್ಕು ಟೇಬಲ್‌ಗಳನ್ನು ಅಳವಡಿಸಲಾಗಿದೆ.
ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.
ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ಮುಂದುವರೆದ ಮುನ್ನಡೆಬಿಜೆಪಿ ಅಭ್ಯರ್ಥಿ ಒಟ್ಟು 6440 ಮತಗಳು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ ನಾರಾಯಣರಾವ್‌ಗೆ 3188 ಹಾಗೂ ಜೆಡಿಎಸ್ ಅಭ್ಯರ್ಥಿ ಯಾಸ್ರಬ್ ಖಾದ್ರಿಗೆ ಕೇವಲ 549 ಮತಗಳು ಮಾತ್ರ ಲಭಿಸಿವೆ. ಬಿಜೆಪಿ ಅಭ್ಯರ್ಥಿಯ ಒಟ್ಟು ಮುನ್ನಡೆ 3252.
ಬಿಜೆಪಿ ಬಂಡಾಯ ಅಭ್ಯರ್ಥಿ ಖುಬಾಗೆ ಭಾರೀ ಹಿನ್ನೆಡೆಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚಿತ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಬಂಡಾಯವಾಗಿ ಸ್ಪರ್ಧಿಸಿ ಸಾಕಷ್ಟು ಪೈಪೋಟಿ ನೀಡಿದರಾದರೂ, ಮತ ಗಳಿಕೆಯಲ್ಲಿ ತೀರಾ ಹಿನ್ನಡೆ ಅನುಭವಿಸುತ್ತಿದ್ದಾರೆ.
ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಹುಟ್ಟಿಸಿದ ಮಲ್ಲಿಕಾರ್ಜುನ ಖುಬಾ ಎರಡು ಸುತ್ತಿನ ಮತ ಎಣಿಕೆಯಲ್ಲಿ ಕೇವಲ 618 ಮತಗಳನ್ನು ಮಾತ್ರ ಪಡೆದಿದ್ದಾರೆ. ಇದು ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿಗಿಂತ 5822 ಮತಗಳಿಂದ ಹಿಂದೆ ಬಿದ್ದಿದ್ದಾರೆ. ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಬಂದಿದ್ದರು. ಕಳೆದ ಬಾರಿ ದಿವಂಗತ ಶಾಸಕ ಬಿ.ನಾರಾಯಣರಾವ್ ಎದುರು ಸೋಲನುಭವಿಸಿದರು. ಆದರೆ, ಗಣನೀಯ ಮತಗಳನ್ನು ಪಡೆದಿದ್ದರು.
Karnataka by-elections 2021 Bidar Basavakalyan election result bjp candidate Sharanu Salagar leading
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm