ಬ್ರೇಕಿಂಗ್ ನ್ಯೂಸ್
26-08-20 04:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಪ್ರಕಟಿಸಿದರು.
ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಆನ್ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದರು.

ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.
ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm