ಬ್ರೇಕಿಂಗ್ ನ್ಯೂಸ್
08-05-21 10:11 pm Satish, Correspondent ಕರ್ನಾಟಕ
ನವದೆಹಲಿ, ಮೇ 8: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಕೋವಿಡ್ ಪಾಸಿಟಿವ್ ರಿಪೋರ್ಟ್ ತೋರಿಸಬೇಕೆಂದು ಕಡ್ಡಾಯ ಪಡಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಯನ್ನು ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆಯನ್ನು ನೀಡಿದೆ.
ಕೊರೊನಾ ಎರಡನೇ ಅಲೆ ಮಾರಣಾಂತಿಕ ಆಗುತ್ತಿರುವ ಸಂದರ್ಭದಲ್ಲಿ ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಕುರಿತ ನೀತಿಯನ್ನು ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು ಯಾವುದೇ ವ್ಯಕ್ತಿ ಸೋಂಕಿನ ಲಕ್ಷಣಗಳಿಂದ ಬಳಲುತ್ತಿದ್ದರೆ, ಆತನಿಗೆ ಪಾಸಿಟಿವ್ ರಿಪೋರ್ಟ್ ಬೇಕೆಂದು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ಶಂಕಿತ ಲಕ್ಷಣಗಳಿದ್ದರೆ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ.

ಈ ಹೊಸ ಮಾರ್ಗಸೂಚಿ ಎಲ್ಲ ರಾಜ್ಯಗಳ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುತ್ತದೆ. ಈ ಬಗ್ಗೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪ್ರಾದೇಶಿಕ ಮಟ್ಟದ ಆಸ್ಪತ್ರೆಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಯಾವುದೇ ವ್ಯಕ್ತಿಯನ್ನು ಕೋವಿಡ್ ವಾರ್ಡಿಗೆ ದಾಖಲಿಸಿಕೊಳ್ಳಲು ಪಾಸಿಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ಕಡ್ಡಾಯ ಮಾಡುವಂತಿಲ್ಲ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಯಾವುದೇ ವ್ಯಕ್ತಿ ದೇಶದ ಯಾವುದೇ ನಗರ ಅಥವಾ ಇನ್ನಾವುದೇ ಭಾಗದಲ್ಲಿ ಆಸ್ಪತ್ರೆಗೆ ದಾಖಲಾದರೂ, ಆತನಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. ಆತನಿಗೆ ಬೇಕಾದ ಆಕ್ಸಿಜನ್ ಇನ್ನಿತರ ಸೌಲಭ್ಯಗಳನ್ನೂ ಒದಗಿಸಬೇಕು.
ಯಾವುದೇ ನಗರಗಳಲ್ಲಿ ಆಯಾ ಭಾಗದ ಆಸ್ಪತ್ರೆಗಳು ದಾಖಲಾದ ವ್ಯಕ್ತಿಯನ್ನು ಇದೇ ಪರಿಸರದ ನಿವಾಸಿಯೆಂದು ಐಡಿ ಕಾರ್ಡ್ ತೋರಿಸುವಂತೆ ಕಡ್ಡಾಯ ಪಡಿಸುವಂತಿಲ್ಲ. ಆತ ದೇಶದ ಯಾವುದೇ ಮೂಲೆಯ ನಿವಾಸಿಯೇ ಆಗಿದ್ದರೂ, ಆತನಿಗೆ ಅಗತ್ಯವುಳ್ಳ ಚಿಕಿತ್ಸೆಯನ್ನು ಆಸ್ಪತ್ರೆಗಳು ನೀಡಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ಕೇಂದ್ರ ಸರಕಾರ ಹೇಳಿದೆ.
The Centre on May 8 revised the national policy for admission of COVID-19 patients to the hospitals. A test report confirming the coronavirus infection is no longer mandatory for admission of patients to the COVID-dedicated medical facilities, the Union Health Ministry said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm