ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm