ಬ್ರೇಕಿಂಗ್ ನ್ಯೂಸ್
27-08-20 11:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕರಾವಳಿಯ ಶಾಸಕರು ಮನವಿ ಸಲ್ಲಿಸಿದ್ದಾರೆ.
ನಮ್ಮ ದೇಶದಲ್ಲಿನ ಬಹುತೇಕ ರಾಜ್ಯಗಳಲ್ಲಿ ತಮ್ಮ ತಮ್ಮ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅದಿಕೃತ ಭಾಷೆಯನ್ನಾಗಿ ಸಂವಿಧಾನದ ಆರ್ಟಿಕಲ್ 345- ಬಿ ಪ್ರಕಾರ ಘೋಷಿಸಿಕೊಂಡಿದೆ. ಕಳೆದ 2011ನೇ ಜನಗಣತಿ ಪ್ರಕಾರ ಸುಮಾರು18.05 ಲಕ್ಷ ಜನರು ಅಧಿಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ.
ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸರಿ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಕರಿದ್ದು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ಒಂದುವರೆ ಕೋಟಿಗಿಂತಲೂ ಅಧಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿರುತ್ತದೆ.
ತಮ್ಮ ಅವಗಾಹಣೆಗಾಗಿ ಸಲ್ಲಿಸಿರುವ ಮಾಹಿತಿಗಳನ್ನು ಅವಲೋಕಿಸಿ ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಸಂವಿಧಾನದ ಆರ್ಟಿಕಲ್ 345 ರ ಪ್ರಕಾರ ಘೋಷಿಸಲು ರಾಜ್ಯ ಸರ್ಕಾರ ಅನುಸರಿಸಬೇಕಾದ ಮತ್ತು ಈಗಾಗಲೇ ಕೈಗೊಂಡ ಕ್ರಮಗಳೊಂದಿಗೆ ಸಾಂವಿಧಾನಿಕ ನೀತಿ ನಿಯಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡುವಂತೆ ಆಗ್ರಹಿಸಬೇಕು. ಈ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕೆಂದು ಕರಾವಳಿ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಸ್ತಾವನೆ ಮಂಡಿಸಿ ಅನುಮೋದನೆಯನ್ನು ಪಡೆದು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮತ್ತು ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗಿ ಸಿಎಂ ಯಡಿಯೂರಪ್ಪ ಅವರನ್ನು ಕರಾವಳಿಯ ಶಾಸಕರು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ ಸಿದ್ದಿ ಉಪಸ್ಥಿತರಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm