ಬ್ರೇಕಿಂಗ್ ನ್ಯೂಸ್
19-05-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಬೇಕು. ಸರಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಒಂದು ತಿಂಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ಹೆಚ್ಚಳವಾಗುತ್ತಿವೆ. ಆದುದರಿಂದ, ಮೇ 24ರ ಬಳಿಕವೂ ಸರಕಾರ ಲಾಕ್‍ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದರು.
ಒಂದು ವೇಳೆ ಸರಕಾರ ಲಾಕ್‍ಡೌನ್ ವಿಸ್ತರಣೆ ಮಾಡದೇ ಇದ್ದರೆ ದೊಡ್ಡ ಅನಾಹುತಗಳು ಸಂಭವಿಸಬಹುದು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಪರೀಕ್ಷೆಗಳು ಕಡಿಮೆ ಸಂಖ್ಯೆಯಲ್ಲಿ ಆಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಕಡಿಮೆ ಕಾಣಿಸುತ್ತಿದೆ. ಪರೀಕ್ಷೆಗಳ ಪ್ರಮಾಣ ಕಡಿಮೆ ಆಗುತ್ತಿರುವುದು ಆತಂಕಕಾರಿ ಎಂದು ಅವರು ಹೇಳಿದರು.
ರಾಜ್ಯ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಜೀವದ ಜೊತೆ ಆಟವಾಡುತ್ತಿರುವುದು ಸರಿಯಲ್ಲ. ಈಗಾಗಲೇ ಈ ವಿಚಾರದಲ್ಲಿ ಸರಕಾರ ಸಾಕಷ್ಟು ಎಡವಿದೆ. ಇನ್ನು ಮುಂದೆಯೂ ಅದೇ ತಪ್ಪುಗಳನ್ನು ಪುನರಾವರ್ತನೆ ಮಾಡುವುದು ಸರಿಯಲ್ಲ. ತಾತ್ಕಾಲಿಕವಾಗಿ ಈಗ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ
ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಸೋಂಕಿಗೆ ಲಸಿಕೆ ಬಂದ ಆರಂಭದ ದಿನಗಳಲ್ಲಿ ಅದನ್ನು ಯಾರು ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿ, ಈಗ ಲಸಿಕೆಯನ್ನು ಅವರದೇ ಪಕ್ಷದ ವತಿಯಿಂದ ಕೊಡಲು ಮುಂದಾಗಿದ್ದು ಅದರ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಈ ಮೂಲಕ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.
HD Kumaraswamy says extend lockdown for a Month and provide a good package for the poor people in Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm