ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm