ಬ್ರೇಕಿಂಗ್ ನ್ಯೂಸ್
26-05-21 03:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಹೃದಯಾಘಾತಕ್ಕೊಳಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿತರಾಗಿ ಗುಣಮುಖರಾಗಿದ್ದ ಅವರನ್ನು ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ ಸೇರಿದಂತೆ ಹೃದಯ ಕಾಯಿಲೆಗಳಿದ್ದವು. ವಯೋಸಹಜ ಕಾಯಿಲೆಗಳಿದ್ದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಮಧ್ನಾಹ್ನ ಅವರು ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.




ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿತ್ತು. ಬಳಿಕ ಚೇತರಿಕೆ ಕಂಡಿದ್ದ ಅವರನ್ನು ಜಯನಗರದದಲ್ಲಿರುವ ನಿವಾಸಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆದರೆ, ಮನೆಗೆ ತೆರಳಿದ ಒಂದು ದಿವಸದಲ್ಲಿ ಮತ್ತೆ ದೇಹಸ್ಥಿತಿ ದುರ್ಬಲಗೊಂಡಿದ್ದರಿಂದ ಮರಳಿ ಮೇ 14ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಎಂಬ ಪೂರ್ಣನಾಮ ಹೊಂದಿದ್ದ ಅವರು, ಆರಂಭದಲ್ಲಿ ಉಪನ್ಯಾಸಕರಾಗಿದ್ದು 1942ರ ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದಲ್ಲದೆ, 14 ತಿಂಗಳ ಕಾಲ ಸೆರೆವಾಸ ಅನುಭವಿಸಿದ್ದರು. ಆಬಳಿಕ ಗಾಂಧಿ ಮಾರ್ಗದಲ್ಲಿ ನಡೆಯುತ್ತಾ ಹಲವು ಜನಪರ ಚಳವಳಿಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಈ ಮಧ್ಯೆ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದ ಅವರು ಹಲವು ಪತ್ರಿಕೆಗಳಿಗೆ ಬರೆದಿದ್ದರು. ಇಳಿವಯಸ್ಸಿನಲ್ಲಿಯೂ ಜನಪರ ವಿಚಾರಗಳಲ್ಲಿ ಭಾಗವಹಿಸುತ್ತಿದ್ದುದು, ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸುತ್ತಿದ್ದುದು ಇಂದಿನ ಜನಾಂಗಕ್ಕೆ ಮಾದರಿ ಅನ್ನುವಂತಿದ್ದರು. ಬದುಕಿದ್ದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಅವರೊಬ್ಬರೇ ಸಮಾಜದಲ್ಲಿ ಧ್ವನಿಯಾಗಿದ್ದವರು.


ದೊರೆಸ್ವಾಮಿ ನಿಧನಕ್ಕೆ ಸಿಎಂ ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ , ಇಳಿವಯಸ್ಸಿನಲ್ಲೂ ದಣಿವರಿಯದೆ ಸಮಾಜದ ಪರ ಧ್ವನಿಯಾಗುತ್ತಿದ್ದ ದೊರೆಸ್ವಾಮಿ ಅವರ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಡಿಕೆಶಿ ಹೇಳಿದ್ದಾರೆ.
103-year-old HS Doreswamy had remained active, participating in various agitations over the years including the CAA protest in 2020. Over the decades, Doreswamy has been a constant figure at various civil rights struggles in Karnataka.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am