ಬ್ರೇಕಿಂಗ್ ನ್ಯೂಸ್
28-05-21 01:23 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್‌ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್‌ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, "ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್‌ನಿಂದ ಬಂದ ಆಕ್ಸಿಜನ್‌ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.

ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್;
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್‌ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್‌ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.
ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ;
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
Read: ಕುವೈಟ್ ಭಾರತೀಯ ನಿವಾಸಿಗಳಿಂದ ಭಾರೀ ಪ್ರಮಾಣದ ನೆರವು ; 252 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ
The truck carrying an oxygen cryogenic container from Mangaluru reaches Shivamogga. The medical oxygen was donated by the government of the Kingdom of Kuwait to India.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm