ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm