ಬ್ರೇಕಿಂಗ್ ನ್ಯೂಸ್
11-06-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡ ಭಾಷೆಯಲ್ಲಿರಲಿದ್ದು, ಈ ನಡೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
ಈ ಕುರಿತು ಗುರುವಾರ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, "ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ" ಎಂದು ಹೇಳಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಕನ್ನಡದ ಕುರಿತು ಇನ್ನಷ್ಟು ವಿಷಯಗಳ ಕುರಿತು ಮಾತನಾಡಿದ್ದಾರೆ.

ಹಿಂದಿನ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಲು ಒತ್ತಾಯ. ಐಬಿಪಿಎಸ್ ಪರೀಕ್ಷೆಗಳ ಕುರಿತು ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ತಿಳಿಸಿದ್ದಾರೆ.
ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು ಎಂದಿದ್ದಾರೆ.
ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ.
— H D Kumaraswamy (@hd_kumaraswamy) June 11, 2021
6/6
ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್(ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
— H D Kumaraswamy (@hd_kumaraswamy) June 11, 2021
1/6
Formers cm HD Kumaraswamy Congratulate on IBPS Exams Will Be Held in Kannada
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm