ಬ್ರೇಕಿಂಗ್ ನ್ಯೂಸ್
13-06-21 12:29 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 13: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎದ್ದಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಜೂನ್ 16ರಿಂದ ಮೂರು ದಿನ ಬೆಂಗಳೂರಿನಲ್ಲಿ ಇರಲಿದ್ದು ಸಚಿವರು, ಪಕ್ಷದ ಹಿರಿಯ ನಾಯಕರು, ಅಪಸ್ವರ ಎತ್ತಿರುವ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಪ್ರಮುಖವಾಗಿ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಸೇರಿದಂತೆ ಮೂರು ಮುಖ್ಯ ಗುರಿ ಇಟ್ಟುಕೊಂಡು ಅರುಣ್ ಸಿಂಗ್ ಈ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಅಗತ್ಯವಿದೆಯೇ..? ಒಂದೊಮ್ಮೆ ಯಡಿಯೂರಪ್ಪ ಅವರನ್ನು ಬದಲಿಸಿದರೆ ಆಗಬಹುದಾದ ಪರಿಣಾಮಗಳು ಏನೇನು? ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹೇಗೆ? ಎಂಬ ಬಗ್ಗೆ ಆರ್‌ಎಸ್‌ಎಸ್ ನಾಯಕರು, ಬಿಜೆಪಿ ಹಿರಿಯ ನಾಯಕರು, ಸಚಿವರು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಇದೇ ವೇಳೆ, 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದು ಹೇಗೆ ? ಅದಕ್ಕಾಗಿ ಸರ್ಕಾರ ಮತ್ತು ಪಕ್ಷದಲ್ಲಿ ಮಾಡಬೇಕಾದ ಬದಲಾವಣೆ ಏನು ? ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕಾದ ಅಗತ್ಯವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹೀಗೆ ಎಲ್ಲದರ ಬಗ್ಗೆ ಶಾಸಕರು ಮತ್ತು ಪಕ್ಷದ ನಾಯಕರ ಜೊತೆ ಚರ್ಚಿಸಿ ವರದಿ ನೀಡುವಂತೆ ಅರುಣ್ ಸಿಂಗ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ಅರುಣ್ ಸಿಂಗ್ ನೀಡುವ ವರದಿ ಆಧರಿಸಿ ಜೆ.ಪಿ. ನಡ್ಡಾ ಅಂತಿಮ ನಿರ್ಧಾರ ಮಾಡಲಿದ್ದಾರೆ.
ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ವಿರೋಧಿ ಬಣವು ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹೇರುತ್ತಿದ್ದು, ಈ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗ್ಲೇ ಅರುಣ್ ಸಿಂಗ್ ದೆಹಲಿಯಲ್ಲಿ ಶಾಸಕಾಂಗ ಸಭೆ ಕರೆಯುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿರುವ ಹಿನ್ನೆಲೆಯಲ್ಲಿ ಈ ರೀತಿಯ ಸಭೆ ಕರೆಯುವ ಸಾಧ್ಯತೆ ಕಡಿಮೆ.
The Bharatiya Janata Party national general secretary in charge of Karnataka, Arun Singh, is arriving in Bengaluru next week on a troubleshooting exercise in the wake of dissidence in the party State unit.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm