ಬ್ರೇಕಿಂಗ್ ನ್ಯೂಸ್
15-06-21 12:20 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 15 : ಭೂ ಒತ್ತುವರಿ ಆರೋಪಕ್ಕೀಡಾಗಿದ್ದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಒಡೆತನದ ಸಾರಾ ಕನ್ವೆನ್ಷನ್ ಹಾಲ್ ಪ್ರಕರಣದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಸಾರಾ ಮಹೇಶ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಸಾರಾ ಪೌಲ್ಟ್ರಿಯನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿ ದಾಖಲೆ ಬಿಡುಗಡೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದ ಶಾಸಕರು ಈ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ನಾಲ್ವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿದ್ದರು. ಸಮಿತಿ ಸಾರಾ ಕನ್ವೆಂಷನ್ ಹಾಲ್ ಅನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿಲ್ಲ ಎಂದು ವರದಿ ನೀಡುವ ಮೂಲಕ ಕ್ಲೀನ್ ಚಿಟ್ ನೀಡಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ಸಮೀಕ್ಷೆ ನಡೆಸಿದ ಸ್ಥಳದ ಮ್ಯಾಪ್ ತೋರಿಸಿ ಸ್ಪಷ್ಟನೆ ನೀಡಿದರಲ್ಲದೆ ಹಳ್ಳದ ಮೇಲೆ ಚೌಲ್ಟ್ರಿ ನಿರ್ಮಿತವಾಗಿಲ್ಲ. ಹಳ್ಳದ ಜಾಗವನ್ನು ಒತ್ತುವರಿ ಮಾಡಿಲ್ಲ. ಕೆಲವು ಕಡೆ 70 ಮೀಟರ್ ಅಂತರ ಇರುವುದನ್ನು ತೋರಿಸಲಾಗಿದೆ. ಎಲ್ಲಿಯೂ ಒತ್ತುವರಿ ಆಗಿಲ್ಲ ಎಂದರು.
30 ವರ್ಷಗಳ ಹಿಂದೆ ಎಕರೆಗೆ 90 ಸಾವಿರ ರೂಪಾಯಿಗೆ ನಾಲ್ಕು ಎಕರೆ ಭೂಮಿ ಖರೀದಿ ಮಾಡಿದ್ದೆ. ಎರಡು ಎಕರೆ ಅಕ್ರಮ ಅಂತಾ ಹೇಳಿದ್ದರು. ನಾನು ಖರೀದಿ ಮಾಡಿದ್ದೇ 4 ಎಕರೆ. ಈ ಬಗ್ಗೆ ಅವರಿಗೇ ಸರಿಯಾದ ಮಾಹಿತಿ ಇಲ್ಲ. ಲಿಂಗಾಂಬುದಿಪಾಳ್ಯ ಬಫರ್‌ಝೋನ್ ವ್ಯಾಪ್ತಿ ಸಂಬಂಧ ಪತ್ರ ಬರೆದಿದ್ದಾರೆ. 2018ರ ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಕಾರ 30 ಮೀಟರ್ ಇದೆ. ಆದರೆ, ರೋಹಿಣಿ ಸಿಂಧೂರಿ 2016ರ ಕಾಯ್ದೆ ಪ್ರಕಾರ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಟೀಕಿಸಿದರು.
ಕರ್ತವ್ಯ ಲೋಪ ಆರೋಪದ ಮೇರೆಗೆ ರೋಹಿಣಿ ಸಿಂಧೂರಿಯ ವರ್ಗಾವಣೆ ಮಾಡಿರುವುದು. ಆದರೆ ಅದನ್ನು ಮುಚ್ಚಿಡುವ ಸಲುವಾಗಿ ಭೂಮಾಫಿಯಾ ಆರೋಪ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.
The committee constituted to investigate the allegations against Sara Choultry submitted a report on Monday stating that the said building had not been constructed on the Rajakaluve.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm