ಬ್ರೇಕಿಂಗ್ ನ್ಯೂಸ್
18-06-21 03:24 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 18 : ಬಿ.ಎಸ್ ಯಡಿಯೂರಪ್ಪನವರು ಈ ಹಿಂದೆಯೂ ತಮ್ಮ ಮಕ್ಕಳ ಭ್ರಷ್ಟಾಚಾರದಿಂದಲೇ ಜೈಲಿಗೆ ಹೋಗಿ ಬರುವಂತಾಗಿತ್ತು. ಈ ಸಲ ಕೂಡ ಅವರು ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದೇನೋ ಎಂಬ ಆತಂಕ ನನಗಿದೆ. ಅದಕ್ಕಾಗಿ ಪಕ್ಷದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಸರ್ಕಾರದಲ್ಲಿ ಆಗುತ್ತಿರುವ ಅಕ್ರಮಗಳನ್ನು ವರಿಷ್ಠರ ನಾಯಕರ ಗಮನಕ್ಕೆ ತರಲು ಪ್ರಯತ್ನ ಮಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ನಾಯಕ ಹೆಚ್. ವಿಶ್ವನಾಥ್ ಮತ್ತೆ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಕರೆದು ತರಾತುರಿಯಲ್ಲಿ ಅಂಗೀಕಾರ ಮಾಡಿದ್ದಾರೆ, ವಿವಿಧ ಇಲಾಖೆಗಳಲ್ಲಿ, ಸಚಿವರ ಕೆಲಸಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಕಿಕ್ ಬ್ಯಾಕ್ ಸರ್ಕಾರ ಎಂದು ಕಿಡಿಕಾರಿದರು. ಸಚಿವರ ಖಾತೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ, ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ, ಇದೇನು ಕಾಂಟ್ರಾಕ್ಟ್ ಓರಿಯೆಂಟೆಡ್ ಸರ್ಕಾರನಾ ಎಂದು ವಿಶ್ವನಾಥ್ ಪ್ರಶ್ನಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರದ ವಿರುದ್ಧ ಯಾರೂ ಮಾತನಾಡುತ್ತಿಲ್ಲ. ನೀವೊಬ್ಬರೇ ಹೀಗೆ ಆರೋಪ ಮಾಡುತ್ತಿದ್ದೀರಿ, ಅಧಿಕಾರ ಸಿಗದೆ ಮಾತನಾಡುತ್ತಿದ್ದೀರಿ ಎಂಬ ಮಾತುಗಳು ಕೇಳಿಬರುತ್ತಿದೆಯಲ್ಲವೇ ಎಂದು ಕೇಳಿದಾಗ ವಿಶ್ವನಾಥ್, ಈ ಸರ್ಕಾರ ಅಸ್ತಿತ್ವಕ್ಕೆ ಬರಲು ನಾನು ಕೂಡ ಕಾರಣ, ನನಗೆ ಅಧಿಕಾರ ಸಿಗಬೇಕೆಂಬ ಆಸೆಯಿಲ್ಲ. ಆದರೆ ಕೆಲವರ ಹಣ-ಅಧಿಕಾರ ದಾಹದಿಂದ ಪಕ್ಷ ಹಾಳಾಗಿ ಹೋಗಬಾರದು ಎಂಬುದು ನನ್ನ ಉದ್ದೇಶವಷ್ಟೆ, ಇನ್ನು ಸಿಎಂ ಮತ್ತು ಅವರ ಕುಟುಂಬದವರ ಬಗ್ಗೆ ಮಾತನಾಡಲು ಬಹುತೇಕ ಸಚಿವರು, ಶಾಸಕರಿಗೆ ಧೈರ್ಯವಿಲ್ಲವಷ್ಟೆ. ಇತ್ತೀಚೆಗೆ ಈಶ್ವರಪ್ಪ ಏಕೆ ರಾಜ್ಯಪಾಲರಿಗೆ ದೂರು ಕೊಟ್ಟರು ಎಂದು ಪ್ರಶ್ನಿಸಿದರು. ಇದಲ್ಲದೆ, ಸುದ್ದಿಗೋಷ್ಠಿಯಲ್ಲಿ ಪೂರಕ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದರು.
ಬಿ.ವೈ ವಿಜಯೇಂದ್ರ ವಿರುದ್ಧ ಇಡಿಯಲ್ಲಿ ಪ್ರಕರಣವಿದೆ, ಹಾಗಾಗಿ ಆಗಾಗ ದೆಹಲಿಗೆ ಹೋಗಿ ಬರುತ್ತಿದ್ದಾರೆ. ಬಿಜೆಪಿ ಯಾವುದೇ ಕುಟುಂಬದ ಪಾರ್ಟಿಯಲ್ಲ. ಸರ್ಕಾರ ಯಾರ ಆಸ್ತಿಯೂ ಅಲ್ಲ, ಇದು ಜನರದ್ದು ಎಂದರು.
ರೇಣುಕಾಚಾರ್ಯ, ವಿಶ್ವನಾಥ್, ಹಾಲಪ್ಪ ಬಗ್ಗೆ ವ್ಯಂಗ್ಯ
ಇನ್ನು ತಮ್ಮ ವಿರುದ್ಧ ನಿನ್ನೆ ಹರಿಹಾಯ್ದಿದ್ದ ಎಂ.ಪಿ ರೇಣುಕಾಚಾರ್ಯ ಅವರಿಗೆ ನರ್ಸ್ ಜಯಲಕ್ಷ್ಮಿ ಪ್ರಕರಣದಲ್ಲಿ ಏನಾಯ್ತು ? ಎಸ್.ಆರ್ ವಿಶ್ವನಾಥ್ ಬಚ್ಚಾ, ಇವತ್ತು ನನ್ನಂಥವರ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ಕೋಟಿ ಕೋಟಿ ದೋಚುತ್ತಿದ್ದಾನೆ. ಇನ್ನು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ ಆತನ ಪತ್ನಿಯ ಮೇಲೆಯೇ ಅತ್ಯಾಚಾರ ಮಾಡಿದವ, ಸಿದ್ದರಾಮಯ್ಯನವರೇ ನಾನು ನಿಮಗೆ ಅದೆಷ್ಟು ದ್ರಾಕ್ಷಿ ತಿನ್ನಿಸಿದ್ದೇನೆ ಎಂದು ಬಹಿರಂಗವಾಗಿಯೇ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm