ಬ್ರೇಕಿಂಗ್ ನ್ಯೂಸ್
19-06-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 19: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಯ ಪ್ರಕಾರ ಒಂದು ಬೆಂಚ್‌ನಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.
ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು.
3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಪರೀಕ್ಷಾ ಸಮಯವನ್ನು ಅಪಹರಾಹ್ನ 10.30ರಿಂದ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಈ ವರ್ಷ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ ಒಂದು ಡೆಸ್ಕ್'ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ಪಾಸಾಗಲು ಅಗತ್ಯ ಕನಿಷ್ಠ ಅಂಕ ನೀಡಲಾಗುವುದು. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುವುದು. ಅಂಕ ಹಾಗೂ ಗ್ರೇಡ್ ಎರಡೂ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ಎಸ್ಎಸ್ಎಲ್'ಸಿಗೆ ನೋಂದಾಯಿಸಿಕೊಂಡಿರುವ 8.77 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರೆ ಸಿಬ್ಬಂದಿ ಸೇರಿ 1 ಲಕ್ಷ ಮಂದಿಗೆ ಎನ್95 ಮಾಸ್ಕ್ ಖರೀದಿಸಿ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿಧಿಯಿಂದ ಅನುದಾನ ಬಳಕೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದಿದೆ.
Karnataka SSLC Exam 2021 Guidelines Released Only One Student for One Bench.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm