ಬ್ರೇಕಿಂಗ್ ನ್ಯೂಸ್
25-06-21 04:43 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿಯಿತ್ತ ಜಾರಕಿಹೊಳಿ, ಬಳಿಕ ಹೊರಬಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ಸ್ವಾಮೀಜಿ ಬಳಿಗೆ ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕೀಯವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನೂ ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಜಾರಕಿಹೊಳಿ ಒತ್ತಿ ಹೇಳಿದರು.
ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ಹಾಗೆಂದು ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ. ಅದಕ್ಕಾಗಿ ಮುಂಬೈಗೆ ಹೋಗಿದ್ದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲೇ ನಡೆಯಲಿದೆ. ಆನಂತರ ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
Ramesh Jarkiholi left for Mysuru in his private aircraft from the Sambra airport in Belagavi on Friday. Later, he is expected to head to Bengaluru to meet Chief Minister B.S. Yediyurappa.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm